“ಮೊದಲು ಪಾಕಿಸ್ತಾನದ ಜಪ ನಿಲ್ಲಿಸಿ, ಕರ್ನಾಟಕಕ್ಕೆ ಬರಬೇಕಾದ ಹಣ ಕೊಡಿ”

admin
By admin
1 Min Read

ಭಾರತೀಯರ ವೋಟು ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ನಿಮಗೆ ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ ಪಾಕಿಸ್ತಾನದವರಿಗೆ ಪೌರತ್ವ ನೀಡುವುದು ಆದ್ಯತೆಯೋ? ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡಲಾಗದಿದ್ದರೂ ಪಾಕಿಸ್ತಾನದ ಮೇಲೆ ನಿಮಗೆ ಪ್ರೀತಿ ಉಕ್ಕುತ್ತಿರುವುದೇಕೆ? ಅಲ್ಲಿನವರ ಮೇಲೆ ಯಾಕಿಷ್ಟು ಮಮಕಾರ? ಎಂದು ಪ್ರಶ್ನೆಗಳ ಪ್ರಶ್ನೆ ಮಾಡಿದ್ದಾರೆ.

25 ಸಂಸದರನ್ನು ಕೊಟ್ಟ ಕರ್ನಾಟಕದಲ್ಲಿ ಉಂಟಾದ ನೆರೆಯಿಂದ 35 ಸಾವಿರ ಕೋಟಿ ನಷ್ಟವಾದರೂ ಕೊಟ್ಟಿದ್ದು ಚಿಕ್ಕಾಸು,ನರೇಗಾ ಬಾಕಿ ಕೊಟ್ಟಿಲ್ಲ, ತೆರಿಗೆಯಲ್ಲಿ ರಾಜ್ಯದ ಪಾಲು ಕೊಟ್ಟಿಲ್ಲ,ಬರ ಪರಿಹಾರವಿಲ್ಲ.ಇವುಗಳ ಬಗ್ಗೆ ಮಾತನಾಡಲಾಗದ ನೀವು ಮಾತಾಡುವುದು ಪಾಕಿಸ್ತಾನದ ಬಗ್ಗೆ. ಮೊದಲು ಪಾಕಿಸ್ತಾನದ ಜಪ ನಿಲ್ಲಿಸಿ, ಕರ್ನಾಟಕಕ್ಕೆ ಬರಬೇಕಾದ ಹಣ ಕೊಡಿ ಎಂದು ಒತ್ತಾಯಿಸಿದ್ದಾರೆ.

Share This Article