ರಾಜ್ಯದಲ್ಲಿ ಚುನಾವಣೆ ಮುಗಿದ ನಂತರದಿಂದಲೂ ಯಾವಾಗ ಸುಪ್ರ ವಿಸ್ತರಣೆ ಆಗುತ್ತದೆ ಎಂದು ಕಾಯುತ್ತಿದ್ದಾರೆ ಹಾಗೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ಲಗ್ಗೆ ಇಟ್ಟಿರುವವರು ಕೂಡ ಇದರ ನಿರೀಕ್ಷೆಯಲ್ಲಿದ್ದಾರೆ . ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯದ ಸಮಸ್ಯೆಗಳ ಕುರಿತು ಮಾಹಿತಿ ನೀಡಲಾಗಿದೆ. ಮುಂದಿನ ವಾರ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗುವುದು. ಇದೇ ವೇಳೆ ರಾಜ್ಯಕ್ಕೆ ಬರಬೇಕಾದ ಅನುದಾನ ಪಡೆಯುವ ಕುರಿತು ಚರ್ಚೆ ನಡೆಸಲಾಗುವುದು. ಶೀಘ್ರವೇ ಅನುದಾನ ಪಡೆಯಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿ ಮಾಡುವ ಕುರಿತಾಗಿ ವಾಲ್ಮೀಕಿ ಸಮಾಜದ ಶ್ರೀಗಳು ಗಡುವು ನೀಡಿರುವ ಬಗ್ಗೆ ಎರಡು – ಮೂರು ದಿನಗಳಲ್ಲಿ ಸ್ವಾಮೀಜಿ ಮತ್ತು ವಾಲ್ಮೀಕಿ ಸಮುದಾಯದ ಶಾಸಕರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಸಿಎಂ ತಿಳಿಸಿದ್ದಾರೆ.