ಪ್ರಧಾನಮಂತ್ರಿ ಯೋಜನೆಯಡಿಯಲ್ಲಿ ರೂಪಗೊಳ್ಳಲಿರುವ ಕ್ರೀಡಾ ಸಮುಚ್ಚಯ ನಿರ್ಮಾಣ ಮಾಡುವ ಕಾರ್ಯಕ್ರಮದ ಅಧ್ಯಕ್ಷತೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಮೊದಲ ಹಂತದ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಇಂದು ಚಾಲನೆ ನೀಡಲಾಗಿದೆ. ಆದಷ್ಟು ಬೇಗ ಃಖಖಿS ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುದು. ಧಾರವಾಡ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ.
ಪ್ರಧಾನ ಮಂತ್ರಿಗಳ ಆಶಯದಂತೆ ಫಿಟ್ ಇಂಡಿಯಾ ಕಲ್ಪನೆಯನ್ನು ಸಾಕಾರಗೊಳಿಸಲು, ಹುಬ್ಬಳ್ಳಿಯಲ್ಲಿ ಸ್ಕಾರ್ಟ್ ಸಿ.ಟಿ.ಯೋಜನೆ ಅಡಿ 100 ಕೋಟಿ ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರದ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು.