ಬಂದ್ ವಿಚಾರಕ್ಕೆ ಸಂಬಂದಿಸಿದಂತೆ ಮಾತನಾಡದ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಮುಸ್ಲಿಮರಲ್ಲಿ ಇಲ್ಲಸಲ್ಲದ ವಿಷಯಗಳನ್ನು ಹೇಳಿ ಅವರನ್ನು ಪ್ರತಿಭಟನೆ ಮಾಡುವಂತೆ ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಮುಸ್ಲಿಂ ಬಾಂಧವರ ರಕ್ಷಣೆಗಾಗಿ ಹಲವು ಕ್ರಮಗಳನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿದೆ. ಇದನ್ನು ಸಹಿಸದ ವಿಪಕ್ಷಗಳು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಇಲ್ಲಸಲ್ಲದ ವಿಷಯಗಳನ್ನು ಮುಸ್ಲಿಮರಲ್ಲಿ ತುಂಬಿ ಅವರನ್ನು ಪ್ರಚೋದಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.