ಡಿಕೆ ಶಿವಕುಮಾರ್ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಕೊಡಬೇಕೆಂದು ಬೆಂಬಲಿಗರು ಹೈಕಮಾಂಡ್ ಗೆ ಬೇಡಿಕೆ ಇಟ್ಟಿದ್ದು ಇದರ ವಿಚಾರವಾಗಿ ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಡ. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಸ್ಥಾನ ಅಥವಾ ಎಐಸಿಸಿಯ ಕಾರ್ಯಕಾರಿ ಸಮಿತಿ ಸದಸ್ಯರಾಗುವಂತೆ ವೇಣುಗೋಪಾಲ್ ಅವರು ಡಿ.ಕೆ.ಶಿವಕುಮಾರ್ ಅವರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಡಿ.ಕೆ.ಶಿವಕುಮಾರ್ ಅವರು ನಾನು ಎರಡನೆ ಸಾಲಿನ ನಾಯಕನಲ್ಲ ನೀವು ಕೊಟ್ಟಿದ್ದು ತೆಗೆದುಕೊಳ್ಳುವ ಕಾಲ ಹೋಗಿದೆ.

ಕೊಡುವುದಾದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಹೈಕಮಾಂಡ್ ಕೊಡಲಿ. ಇಲ್ಲವಾದರೆ ಏನೂ ಬೇಡ. ಇನ್ನು ಮೇಲೆ ನನ್ನ ಪಾಡಿಗೆ ನಾನೀರುತ್ತೇನೆ. ಪದೇ ಪದೇ ಪಕ್ಷದ ಕೆಲಸಗಳನ್ನು ಹೇಳುವ ಪ್ರಯತ್ನ ಮಾಡಬೇಡಿ. ನಿಮಗೆ ಪ್ರೀಯರಾದ ನಾಯಕರಿಂದಲೇ ಎಲ್ಲಾ ಕೆಲಸಗಳನ್ನು ಮಾಡಿಸಿಕೊಳ್ಳಿ ಎಂದು ಸ್ಪಷ್ಟವಾಗಿ ತಿರುಗೇಟು ನೀಡಿದ್ದಾರೆ.






