ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಸಭೆ ಸೇರಿದಂತೆ ಫಿಲ್ಮ್ ಸಿಟಿ, ರೋರಿಚ್ ಆರ್ಟ್ ಅಂಡ್ ಕ್ರಾಫ್ಟ್ ಮ್ಯೂಸಿಯಂ ಸ್ಥಾಪನೆ ಕುರಿತ ಸಭೆಯಲ್ಲಿ ಪಾಲ್ಗೊಂಡ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ . ‘ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ಸ್ಥಾಪಿಸಲು ಜಾಗ ಗುರುತು ಮಾಡಲಾಗಿದೆ. ಮುಖ್ಯಮಂತ್ರಿಗಳ ಜತೆ ಈ ವಿಷಯ ಚರ್ಚಿಸಿ ಅವರ ಅನುಮೋದನೆ ಬಳಿಕ ಸ್ಥಳ ನಿಗದಿ ಪಡಿಸಲಾಗುತ್ತದೆ.
ವಿಶ್ವ ಹಾಗೂ ದೇಶದಲ್ಲಿರುವ ಹಲವು ಪ್ರಮುಖ ಫಿಲ್ಮ್ ಸಿಟಿಗಳನ್ನು ನೋಡಿದ್ದೇವೆ, ಅವೆಲ್ಲಕ್ಕಿಂತ ವಿಭಿನ್ನ ಹಾಗೂ ವಿಶಿಷ್ಟವಾದಂಥ ಫಿಲ್ಮ್ ಸಿಟಿ ಸ್ಥಾಪಿಸುವುದು ನಮ್ಮ ಸರ್ಕಾರದ ಕನಸು.ಅನಿಮೇಷನ್ ಕೇಂದ್ರ, ಚಿತ್ರ ನಿರ್ಮಾಣ ಹಾಗೂ ನಿರ್ಮಾಣದ ನಂತರ ಪ್ರಕ್ರಿಯೆಗಳಿಗೆ ಅನುಕೂಲವಾಗುವಂಥ ಫಿಲ್ಮ್ ಸಿಟಿ ಸ್ಥಾಪಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.