ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಕಲ್ಕುಳಿ ವಿಠಲ ಹೆಗಡೆಯವರನ್ನು ಆಯ್ಕೆ ಮಾಡಿರುವುದನ್ನು ಸಹಿಸದೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಸಮ್ಮೇಳನಕ್ಕೆ ಅಡ್ಡಿಯಾಗಿದ್ದಾರೆ. ಎಂಬ ಮಾತು ಇದೆ. ಸಮ್ಮೇಳನಕ್ಕೆ ಅನುದಾನ ತಡೆ ಹಿಡಿದಿರುವುದು, ಪೊಲೀಸರಿಂದ ಅನುಮತಿ ನಿರಾಕರಿಸಿರುವುದು,
ಸರ್ಕಾರಿ ನೌಕರರಿಗೆ ನೀಡಲಾಗುವ ಓಓಡಿ ರದ್ದುಪಡಿಸಿರುವುದು ಸಚಿವರ ಸಾಂಸ್ಕೃತಿಕ ದಬ್ಬಾಳಿಕೆ ಮಾಡಿರುವುದು ತಿಳಿಯುತ್ತದೆ.ಯಾವುದೇ ಕಾರಣಕ್ಕೂ ಸಮ್ಮೇಳನ ನಿಲ್ಲಬಾರದು. ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕಮಗಳೂರು ಜಿಲ್ಲಾ ಘಟಕ ಮತ್ತು ಸುತ್ತಮುತ್ತಲ ಕಾರ್ಯಕರ್ತರು ಪಾಲ್ಗೊಳ್ಳುತ್ತಾರೆ. ಪೊಲೀಸರಿಗೆ ರಕ್ಷಣೆ ಒದಗಿಸಲು ಸಾಧ್ಯವಿಲ್ಲದಿದ್ದರೆ ಕರವೇ ಕಾರ್ಯಕರ್ತರೇ ರಕ್ಷಣೆ ನೀಡುತ್ತಾರೆ ಎಂದು ಅವರು ತಿಳಿಸಿದ್ದಾರೆ.