ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈಗಿನಿಂದಲೇ ಚುನಾವಣೆ ಸಿದ್ಧತೆ ಆರಂಭಿಸುವುದು ಸೂಕ್ತ. ಸದ್ಯಕ್ಕೆ ಚುನಾವಣೆ ಇಲ್ಲ ಎಂದು ಮೈ ಮರೆತು ಕೂರುವುದು ಬೇಡ. ಪಕ್ಷ ಸಂಘಟನೆ ಹಾಗೂ ಚುನಾವಣೆಗೆ ಸಿದ್ಧತೆಯನ್ನು ಜತೆ ಜತೆಯಲ್ಲೇ ಮಾಡಬೇಕೆಂದು ಸೂಚಿಸಿದ್ದಾರೆ. ಚುನಾವಣೆ ಯಾವಾಗ ಬೇಕಾದರೂ ಬರಲಿ, ಆದರೆ ಚುನಾವಣೆ ಎದುರಿಸಲು ಪಕ್ಷ ಸಜ್ಜಾಗಿರಬೇಕು ಎಂಬ ಕಿವಿಮಾತು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ .
ಬಿಬಿಎಂಪಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿರಬೇಕು ಇಗಿಂದಲೆ ಅದಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನು ಗಮನಿಸಿದ ರಾಜಕೀಯ ವಲಯದಲ್ಲಿ ಕೆಲವರು ಉಪಚುನಾವಣೆಯಲ್ಲಿ ಸೋಲನ್ನೊಪಿದ್ದಕ್ಕೆ ಜೆಡಿಎಸ್ ಬಿಬಿಎಂಪಿ ಚುನಾವಣೆ ಮೇಲೆ ತಲೆ ಕೆಡಿಸಿಕೊಂಡಿದೆ ಎಂಬ ಮಾತು ಕೇಳಿಬರುತ್ತಿದೆ.