ಬಿಸಿಸಿಐ ಇಂದು ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದೆ. ಮುಂಬೈನಲ್ಲಿ ನಡೆಯಲಿರುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 26 ವರ್ಷದ ಬುಮ್ರಾಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ವಿಶ್ವ ನಂಬರ್ ಒನ್ ಏಕದಿನ ಬೌಲರ್ ಜಸ್ಪ್ರೀತ್ ಬುಮ್ರಾ ಅವರು 2018 ರ ಜನವರಿಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ್ದರು.
2018-2019 ರ ಅತ್ಯುತ್ತಮ ಅಂತರಾಷ್ಟ್ರೀಯ ಕ್ರಿಕೆಟಿಗ ಎಂಬ ಕೀರ್ತಿಗೆ ಜಸ್ಪ್ರೀತ್ ಬುಮ್ರಾ ಪಾತ್ರರಾಗಿದ್ದಾರೆ. ಬುಮ್ರಾಗೆ ಪಾಲಿ ಉಮ್ರಿಗರ್ ಪ್ರಶಸ್ತಿಯನ್ನು ನೀಡಿ ಬಿಸಿಸಿಐ ಗೌರವಿಸಲಿದೆ.