ಸಚಿವಾಕಾಂಕ್ಷಿಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಭೇಟಿಗೂ ಅವಕಾಶ ಕೊಡಲಿಲ್ಲ. ಒಂದು ವೇಳೆ ಸಂಪುಟ ವಿಸ್ತರಣೆ ಯಾದರೆ ನನಗಿರುವ ಮಾಹಿತಿ ಪ್ರಕಾರ ಸರ್ಕಾರದಲ್ಲಿ ಸ್ಫೋಟವಾಗುತ್ತದೆ ಎಂದು ಹೇಳಿದರು.
ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ ಕೊಡೊಲ್ಲ. ಕೊಡದಿದ್ದರೆ ನೋಡಿಕೊಳ್ಳಿ ಅಂತ ಈಗಾಗಲೇ ವಿಶ್ವನಾಥ್ ಹೇಳಿದ್ದಾರೆ. ಮುಂದಿನ ನೀವೇ ನೋಡಿ ಏನಾಗುತ್ತದೆ ಎಂದರು.ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಮೈತ್ರಿ ಸರ್ಕಾರದ ನಂತರ ಈ ಸರ್ಕಾರ ಬಂದು ಆರು ತಿಂಗಳಾಗಿದೆ.ಕೇವಲ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಇನ್ನು ಮಂತ್ರಿಮಂಡಲ ಪೂರ್ಣ ಪ್ರಮಾಣದಲ್ಲಿ ರಚನೆಯಾಗಿಲ್ಲ. ಹೀಗಾಗಿ ಸರ್ಕಾರ ಟೇಕಾಫ್ ಆಗಿದೆ ಎಂದು ಹೇಳಲಾಗುವುದಿಲ್ಲ ಎಂದು ತಿಳಿಸಿದರು.