ಮಹಾ ಶಿವರಾತ್ರಿ ಮಹಾತ್ಮೆ ಮತ್ತು ಉಪಹಾಸ, ಜಾಗರಣೆಯ ವೈಜ್ಞಾನಿಕ ಕಾರಣಗಳು

Date:

ಇಂದು ಎಲ್ಲೆಡೆ ಶಿವರಾತ್ರಿ ಹಬ್ಬದ ಸಡಗ ಸರ್ವಶಕ್ತ ಶಂಕರನ ನಾಮ ಜಪಿಸಿ ಭಕ್ತರು ಇಷ್ಟ ದೇವನನ್ನು ಭಕ್ತಿಯಿಂದ ಪೂಜಿಸುತ್ತಿದ್ದಾರೆ.
ಜಾಗರಣೆ, ಕೋಸಂಬರಿ, ಪಾನಕಗಳು ಶಿವರಾತ್ರಿಯ ಸಡಗರ ಹೆಚ್ಚಿಸಿವೆ. ಶಿವರಾತ್ರಿ ಅಂದರೆ ಈ ತಿನಿಸುಗಳು ಪಾನಕಗಳದ್ದೇ ಘಮಲು ಅಲ್ಲವೇ?
ಎಲ್ಲಾ ದೇಗುಲಗಳಲ್ಲೂ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜಾಕಾರ್ಯಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾಗರಣೆ ನಡೆಯಲಿದೆ. ಮಹಾ ಶಿವರಾತ್ರಿ ಹಬ್ಬದಲ್ಲಿ ಪ್ರಳಯಕಾಲಕನಾದ ಪರಶಿವನನ್ನು ಅನನ್ಯ ಶ್ರದ್ಧಾ ಮತ್ತು ಭಕ್ತಿಯಿಂದ ನಾಲಕ್ಕು ಯಾಮಗಳಲ್ಲಿ ಪೂಜಿಸಲಾಗುತ್ತದೆ. ಆ ದಿನದಂದು ಶಿವನಿಗೆ ಅತ್ಯಂತ ಇಷ್ಟವಾದ ಬಿಲ್ವಪತ್ರೆಯನ್ನು ಅರ್ಪಿಸಿ, ಉಪವಾಸವನ್ನೂ ಆಚರಿಸುತ್ತಾರೆ. ಜಾಗರಣೆಯನ್ನು ಮಾಡಿ ಶಿವಜಪ, ಭಜನೆಗಳನ್ನು ಮಾಡುತ್ತಾ ಆ ಪರಶಿವನ ಕೃಪೆಗೆ ಪಾತ್ರರಾಗುವುದು ಹಬ್ಬದ ವಿಶೇಷ.
ಮಾಘಮಾಸದ ಚತುರ್ದಶಿಯಂದು ಬರುವಮಹಾಶಿವರಾತ್ರಿಗೆ ನಮ್ಮಲ್ಲಿ ವಿಶೇಷವಾದ ಸ್ಥಾನವಿದೆ. ಪ್ರತಿ ತಿಂಗಳೂ ಚತುರ್ದಶಿಯಂದು ಮಾಸ ಶಿವರಾತ್ರಿ. ಆದರೆ, ಮಾಘ ಕೃಷ್ಣ ಚತುರ್ದಶಿಯಂದು ಮಹಾಶಿವರಾತ್ರಿ. ಮಹಾಶಿವರಾತ್ರಿಯಂದು ಲಯಕರ್ತನಾದ ಶಿವ ಹುಟ್ಟಿದನೆಂಬ ನಂಬಿಕೆ ಕೆಲವರದು. ಸಮುದ್ರ ಮಂಥನ ಕಾಲದಲ್ಲಿ ಶಿವನು ಹಾಲಾಹಲ ಕುಡಿದ ದಿನವೇ ಶಿವರಾತ್ರಿ ಎಂಬುದು ಇನ್ನು ಕೆಲವರ ವಾದ. ಮತ್ತೆ ಕೆಲವರು ಶಿವ ಪಾರ್ವತಿಯನ್ನು ವರಿಸಿದ ದಿನ ಶಿವರಾತ್ರಿ ಎನ್ನುತ್ತಾರೆ. ಆದರೆ, ಶಿವರಾತ್ರಿಯ ದಿನ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ರಾತ್ರಿಯಿಡೀ ಪೂಜಿಸುವುದು ವಾಡಿಕೆ. ಇದಕ್ಕೆ ಬೇಡರ ಕಣ್ಣಪ್ಪನ ತ್ಯಾಗದ ಕತೆಯೂ ಪೂರಕವಾಗಿದೆ.
ಮನುಷ್ಯನ ಜೀವನ ಚಕ್ರ ಸೃಷ್ಟಿ, ಸ್ಥಿತಿ ಮತ್ತು ಲಯಗಳನ್ನು ಅವಲಂಬಿಸಿದೆ. ಜಲ, ನೆಲ, ಗಾಳಿ, ಬೆಂಕಿ ಹಾಗೂ ಆಕಾಶಗಳೆನ್ನುವ ಪಂಚಭೂತಗಳಿಂದ ಆದ ಮಾನವ ಪ್ರಕೃತಿ ನಿಯಮಗಳಿಗೆ ಒಳಪಟ್ಟಿದ್ದಾನೆ. ಪ್ರಕೃತಿಗೂ ಒಂದು ನಿಯಮಿತ ನಿಯಮ, ಚಲನೆಯಿದೆ.

ಭೂಮಿಯ ಸುತ್ತ ಚಲಿಸುವ ಚಂದ್ರ ಒಂದು ದಿನದಲ್ಲಿ 12 ಡಿಗ್ರಿಗಳಷ್ಟು ಸಂಚರಿಸುತ್ತಾನೆ. ಇದಕ್ಕೆ ತಿಥಿ (ಪಾಡ್ಯ, ಬಿದಿಗೆ, ತದಿಗೆ… ) ಎಂದು ಕರೆಯುತ್ತಾರೆ. ಭೂಮಿಯ ಒಂದು ನಿಗದಿತ ಕೋನಕ್ಕೆ ಚಂದ್ರ ಬಂದ ಸಂದರ್ಭದಲ್ಲಿ ಅವರ ಪ್ರಭಾವ ಹೆಚ್ಚಾಗಿರುತ್ತದೆ. ಚಂದ್ರನು ಭೂಮಿಯ 180 ಡಿಗ್ರಿ ಕೇಂದ್ರ- ಕೋನಕ್ಕೆ ಬಂದಾಗ ಆತನ ಆಕರ್ಷಣೆ ಅಧಿಕವಾಗುತ್ತದೆ. ಹೀಗಾಗೇ ಸಮುದ್ರದ ಅಲೆಗಳ ಮೊರೆತವೂ ಹೆಚ್ಚಾಗಲಿದೆ. ಅದಕ್ಕಿಂತ ಮಿಗಿಲಾಗಿ 80ರಷ್ಟು ಜಲವರ್ಗಕ್ಕೆ ಸೇರಿದ ಮನುಷ್ಯನ ಮೆದುಳು, ಜೀರ್ಣಾಂಗ, ಪಿತ್ತಕೋಶ ಹಾಗೂ ಮೂತ್ರ ಜನಕಾಂಗಳ ಮೇಲೂ ಚಂದ್ರನ ಪ್ರಭಾವ ಈ ಅವಧಿಯಲ್ಲಿ ತೀಕ್ಷ್ಣವಾಗಿರುತ್ತದಂತೆ. ಅದಕ್ಕೆ ಅಮಾವಾಸ್ಯೆ ಮತ್ತು ಪೂರ್ಣಿಮೆಯಲ್ಲಿ ಮಾನಸಿಕ ರೋಗಿಗಳಿಗೆ ಉದ್ರೇಕ ಹೆಚ್ಚುತ್ತದೆ ಎಂದು ಹೇಳುತ್ತಾರೆ. ಆಯುರ್ವೇದ ತಜ್ಞರು.

ಮಾಘ ಮಾಸದ ಚತುರ್ದಶಿಯಂದು ಕ್ಷೀಣ ಚಂದ್ರನ ಪ್ರಭಾವ ಹೆಚ್ಚಾಗಿರುವುದರಿಂದ ಅಂದು ಜಾಗರೂಕರಾಗಿದ್ದು, ಜಾಗರಣೆ ಮಾಡಿದರೆ ಅಂದರೆ ನಿದ್ದೆ ಮಾಡದೆ ಎಚ್ಚರವಾಗಿಯೇ ಇದ್ದರೆ, ಮಾನವನಲ್ಲಿ ಉತ್ಸಾಹ ಹೆಚ್ಚಿ, ಆತನ ಚಿಂತನೆ ವೃದ್ಧಿಸುತ್ತದೆ ಎಂಬ ವೈಜ್ಞಾನಿಕ ಕಾರಣವಿದೆ.

ಇನ್ನು ಆರೋಗ್ಯದ ದೃಷ್ಟಿಯಿಂದ ಜಾಗರಣೆ ಮಾಡಲು ಹೇಳಿದರೆ ಯಾರೂ ಜಾಗರಣೆ ಮಾಡುವುದಿಲ್ಲ. ಆದ್ದರಿಂದ ಶಾಸ್ತ್ರದ ಕಟ್ಟಳೆ ಹೆಸರುಗಳನ್ನು ತರಲಾಗಿದೆ ಎಂಬ ಅಭಿಪ್ರಾಯವಿದೆ. ರಾತ್ರಿ ನಿದ್ದೆ ಮಾಡದೇ ಇರಬೇಕಾದರೆ, ಹೊಟ್ಟೆ ಹಸಿದಿರಬೇಕು ಎಂಬ ತತ್ವವಿದೆ. ಇದಕ್ಕಾಗೇ ಮಹಾ ಶಿವರಾತ್ರಿಯ ದಿನ ಉಪವಾಸ ಇರಬೇಕು ಎಂದು ಹೇಳುತ್ತಾರೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...