ಬೆಂಗಳೂರು : ಹಿರಿಯ ಪತ್ರಕರ್ತ, ಜನಪ್ರಿಯ ಸುದ್ದಿ ನಿರೂಪಕ ಗಜಾನನ ಹೆಗಡೆ ನಿಧನರಾಗಿದ್ದಾರೆ. ಬೆಂಗಳೂರಿನ ಜೆ.ಪಿ ನಗರದಲ್ಲಿ ಕಳೆದ ಭಾನುವಾರ ಅಪಘಾತದಲ್ಲಿ ಗಾಯಗೊಂಡಿದ್ದ ಹೆಗಡೆಯವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಪ್ರದವಾಗಿಲ್ಲ. ಶಿರಸಿ ಮೂಲದ ಇವರ ಅಗಲಿಕೆ ಕನ್ನಡ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟ. ಸಾಕಷ್ಟು ಪತ್ರಕರ್ತರ ಗುರುವಾಗಿದ್ದವರು. ಸ್ನೇಹಜೀವಿ ಗಜಾನನ ಹೆಗಡೆ ಕೇವಲ ಪತ್ರಿಕೋದ್ಯಮ ಮಾತ್ರವಲ್ಲದೆ ಸಂಗೀತ ಕ್ಷೇತ್ರದಲ್ಲೂ ತನ್ನದೇಯಾದ ಛಾಪು ಮೂಡಿಸಿದ್ದರು. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹೆಗಡೆ ಅಗಲಿದ್ದಾರೆ.
ಹಿರಿಯ ಪತ್ರಕರ್ತ ಗಜಾನನ ಹೆಗಡೆ ಇನ್ನಿಲ್ಲ
Date: