ದ. ಆಫ್ರಿಕಾ ವಿರುದ್ಧದ ಒಡಿಐಗೆ ರೋಹಿತ್ ಇಲ್ಲದ ಟೀಮ್ ಇಂಡಿಯಾ ಪ್ರಕಟ..!

Date:

ಮಾರ್ಚ್ 12 , 15 ಮತ್ತು 18ರಂದು ತವರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಪ್ರಕಟಿಸಿದೆ. 

ಕನ್ನಡಿಗ ಸುನೀಲ್ ಜೋಶಿ ಆಯ್ಕೆ ಸಮಿತಿ ಮುಖ್ಯಸ್ಥರಾದ ಬಳಿಕ ಮೊದಲ ಬಾರಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆರಂಭಿಕ ಆಟಗಾರ ಶಿಖರ್ ಧವನ್, ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ವೇಗದ ಬೌಲರ್ ಭುವನೇಶ್ವರ್ ಕುಮಾರ್ ತಂಡಕ್ಕೆ ವಾಪಸ್ಸಾಗಿದ್ದಾರೆ. ಆದರೆ ರೋಹಿತ್ ಶರ್ಮಾ ಇಲ್ಲ!


ಹೌದು ಟೀಮ್ ಇಂಡಿಯಾ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಸೌತ್ ಆಫ್ರಿಕಾ ವಿರುದ್ಧ ಕಣಕ್ಕಿಳಿಯುತ್ತಿದೆ. ನ್ಯೂಜಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಗಾಯಗೊಂಡಿದ್ದರು. ಅವರು ಆ ಬಳಿಕ ಏಕದಿನ ಸರಣಿಯನ್ನೂ ಆಡಲಾಗಲಿಲ್ಲ. ಇನ್ನೂ ಕೂಡ ಚೇತರಿಸಿಕೊಳ್ಳದ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡಿಲ್ಲ.

ಇಬ್ಬರು ಕನ್ನಡಿಗರು : ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಇಬ್ಬರು ಕನ್ನಡಿಗರು ಆಡುತ್ತಿದ್ದಾರೆ. ಕೆ.ಎಲ್ ರಾಹುಲ್ ಮತ್ತು ಮನೀಷ್ ಪಾಂಡೆ ತಂಡದಲ್ಲಿರುವ ಕನ್ನಡಿಗರು. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವಕಾಶ ಪಡೆದಿದ್ದ ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ ವಾಲ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅನುಭವಿ ಆಟಗಾರ ಶಿಖರ್ ಧವನ್ ತಂಡಕ್ಕೆ ಮರಳಿರುವುದರಿಂದ ಮಯಾಂಕ್ ಅವಕಾಶ ವಂಚಿತರಾಗಿದ್ದಾರೆ. ರೋಹಿತ್ ಶರ್ಮಾ ಬದಲಿಗೆ ಯುವ ಆಟಗಾರ ಪೃಥ್ವಿಶಾ ಧವನ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಮತ್ತೆ ಪಂತ್​ಗೆ ಚಾನ್ಸ್ : ವಿಶ್ವಕಪ್ ಬಳಿಕ ಮಹೇಂದ್ರ ಸಿಂಗ್ ಧೋನಿ ತಂಡದಿಂದ ದೂರ ಉಳಿದಿದ್ದು, ಅವರ ಅನುಪಸ್ಥತಿಯಲ್ಲಿ ಮೂರೂ ಮಾದರಿಗೆ ಖಾಯಂ ವಿಕೆಟ್ ಕೀಪರ್ ಎಂದು ಘೋಷಿಸಲ್ಪಟ್ಟಿರುವ ಯುವ ಆಟಗಾರ ರಿಷಭ್ ಪಂತ್ ಮತ್ತೆ ಮತ್ತೆ ಎಡವುತ್ತಿದ್ದರೂ ಅವರಿಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಈ ಸರಣಿಯಲ್ಲಿ ಪಂತ್ ಅವಕಾಶವನ್ನು ಬಳಸಿಲಕೊಳ್ಳಲೇ ಬೇಕಿದೆ.
ಭಾರತ ತಂಡ : ಶಿಖರ್ ಧವನ್, ಪೃಥ್ವಿ ಶಾ, ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್ ರಾಹುಲ್, ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ ಕುಮಾರ್, ಯುಜುವೇಂದ್ರ ಚಹಲ್, ಜಸ್ಪ್ರೀತ್ ಬೂಮ್ರಾ, ನವದೀಪ್ ಸೈನಿ, ಕುಲದೀಪ್ ಯಾದವ್, ಶುಭ್​ಮನ್​ ಗಿಲ್.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....