ಸುರಕ್ಷಿತವಾಗಿ ಮನೆಯಲ್ಲೇ ಇರುವಂತೆ ಚಾಲೆಂಜಿಂಗ್​ ಸ್ಟಾರ್ ದರ್ಶನ್ ಕರೆ

Date:

ಕೊರೋನಾ ಹಾವಳಿ ಹೆಚ್ಚಿದೆ… ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ನಮ್ಮ ಕರ್ನಾಟಕ ದೇಶದಲ್ಲೀಗ ಮೂರನೇಸ್ಥಾನಕ್ಕೇರಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ವೇತನ ಸಹಿತ ರಜೆ ಹಾಗೂ ಇಡೀ ರಾಜ್ಯವನ್ನು ಲಾಕ್​ಡೌನ್ ಮಾಡಿದೆ. ಮಾರ್ಚ್​ 31ರವರಗೆ ಇಡೀ ಕರ್ನಾಟಕ ಲಾಕ್​ಡೌನ್ ಆಗಿದೆ. ಆದರೂ ಕೆಲವರು ಮಾತ್ರ ನಮಗೇನು ಸಂಬಂಧವಿಲ್ಲ ಎಂಬಂತೆ ಸರ್ಕಾರದ ಆದೇಶಕ್ಕೂ ಕ್ಯಾರೇ ಎನ್ನದೆ ಓಡಾಡುತ್ತಿದ್ದಾರೆ. ಸುಖಾ ಸುಮ್ಮನೆ ರಸ್ತೆಗಿಳಿಯುತ್ತಿದ್ದಾರೆ.


ಸೆಲೆಬ್ರಿಟಿಗಳು ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್, ವಿಡಿಯೋಗಳನ್ನು ಮಾಡಿ ಹರಿಬಿಡುತ್ತಿದ್ದಾರೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಜನ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಜನರಿಗೆ ಕಿವಿ ಮಾತು ಹೇಳಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದಾರೆ.


“ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೋನ ವೈರಸ್ಸಿನಿಂದ ಪಾರಾಗುವುದು ನಮ್ಮ ಮೊದಲ ಆದ್ಯತೆ ಆಗಿರಬೇಕು. ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಗವರ್ನಮೆಂಟ್, ಡಾಕ್ಟರ್ಸ್, ಪೊಲೀಸ್ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದಯಮಾಡಿ ನಿಮ್ಮ ಫ್ಯಾಮಿಲಿ ಗಾಗಿ, ನಿಮ್ಮ ನೆರೆಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿರಿ. ಈ ಸೋಂಕು ರೋಗ ಬಹಳ ಅಪಾಯಕಾರಿ ಎಂಬುದು ನಿಮಗೆ ತಿಳಿದರೂ ಸಹ ತಮ್ಮ ಊರುಗಳಿಗೆ ಹೋಗುವುದು, ಹಬ್ಬಕ್ಕಾಗಿ ಸಂಚರಿಸುವುದು ಮಾಡದಿರಿ. ನಿಮ್ಮ ಈ ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ. ಇಟಲಿ ಸ್ಪೇನ್ ದೇಶಗಳಲ್ಲಿ ಜಾಗೃತಕ್ರಮಗಳನ್ನು ಮೊದಲೇ ಸರಿಯಾಗಿ ಪಾಲಿಸದೆ ಆಗುತ್ತಿರುವ ಅನಾಹುತಗಳು ನಿಮ್ಮ ಕಣ್ಣ ಮುಂದಿವೆ. ನಿಮ್ಮ ಕರ್ತವ್ಯ ಮನೆಯಲ್ಲಿಯೇ ಇದ್ದು ದೇಶದ ಹಿತಕ್ಕಾಗಿ ಎಲ್ಲಾ ನಿಯಮಗಳನ್ನು ಪಾಲಿಸುವುದು. ಇದನ್ನು ದಯಮಾಡಿ ನೆರವೇರಿಸಿಕೊಡಿ.’Common sense is not common’ ಎನ್ನುವ ಹಾಗೆ ಮಾಡಬೇಡಿ. Please behave like a responsible citizen of the country. ನಿಮ್ಮ ದಾಸ ದರ್ಶನ್” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮೂಲಕ ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....