ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪ.. ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ‌ ಗಲಭೆ..

Date:

ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ಕಳೆದ ರಾತ್ರಿ ದಾಂಧಲೆ ನಡೆದಿದೆ.‌ ದಾಂಧಲೆ ನಿಯಂತ್ರಿಸಲು ಪೊಲೀಸರು ಫೈರಿಂಗ್ ನಡೆಸಿದ್ದರು. ಈ ವೇಳೆ ಪೊಲೀಸರ ಗುಂಡಿನ ದಾಳಿಗೆ ಮೂವರು ದುಷ್ಕರ್ಮಿಗಳು ಬಲಿಯಾಗಿದ್ದಾರೆ.

ಪೊಲೀಸರ ಫೈರಿಂಗ್ ನಲ್ಲಿ 10ಕ್ಕೂ ಹೆಚ್ಚು ದುಷ್ಕರ್ಮಿಗಳಿಗೆ ಗುಂಡಿನೇಟು ತಗುಲಿದೆ. ಒಬ್ಬ ದುಷ್ಕರ್ಮಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದರೆ, ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್, ಮುಸ್ಲಿಂ‌ ಮುದಾಯದ ವಿರುದ್ಧ ಅವಹೇಳಕಾರಿ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪವಿದೆ. ಇದೇ ಹಿನ್ನೆಲೆ‌

ನಿನ್ನೆ ರಾತ್ರಿ 8 ಗಂಟೆಯ ಹೊತ್ತಿಗೆ ಕಾವಲ್ ಬೈರಸಂದ್ರದಲ್ಲಿ ಇರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಎದುರು ಉದ್ರಕ್ತರ ಗುಂಪು ಗಲಾಟೆ ಶುರು ಮಾಡಿತು. ಶ್ರೀ ನಿವಾಸ್ ಅವರ ಮನೆ ಮುಂದೆ‌ ಉದ್ರಿಕ್ತ ಗುಂಪು‌ ದಾಳಿ ಮಾಡಿ, ಗಲಾಟೆ ನಡೆಸಿದ್ದಾರೆ. ಶ್ರೀನಿವಾಸ್ ಅವರ ಮನೆ, ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಾರುಗಳಿಗೆ ಬೆಂಕಿ ಇಟ್ಟಿದೆ.‌

ತಡರಾತ್ರಿ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ರಿಕ್ತರ ಗುಂಪು ದಾಂಧಲೆ ನಡೆಸಿದೆ. ಪೊಲೀಸ್ ಠಾಣೆಗಳ ಮೇಲೆ ಕಲ್ಲು, ಬಾಟಲಿ ತೂರಾಟ ನಡೆಸಿದ್ದು, ಗಲಾಟೆಯಲ್ಲಿ 100ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಬಂದಿದ್ದ ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಅವರ ಕಾರನ್ನೂ ಕಿಡಿಗೇಡಿಗಳು ಜಖಂಗೊಳಿಸಿದ್ದಾರೆ. ಪ್ರಶ್ನಿಸಲು ಹೋದ ಚಾಲಕನ ಮೇಲೂ ಹಲ್ಲೆ ಮಾಡಿದ್ದರು.

ಇನ್ನೂ, ಘಟನಾ ಸ್ಥಳಕ್ಕೆ ಮೀಷನರ್ ಕಮಲ್ ಪಂತ್ ಭೇಟಿ ನೀಡಿ ಮನೆ ಪರಿಶೀಲನೆ ನಡೆಸಿದ್ದಾರೆ. ಗಲಭೆಯ ಹಿನ್ನೆಲೆ 110 ಕ್ಕೂ ಹೆಚ್ಚು ಉದ್ರಿಕ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂದಾಯ ಸಚಿವ ಆರ್‌. ಅಶೋಕ್‌ ರಾತ್ರಿ ಎಲ್ಲಾ ಪೊಲೀಸರ ಜೊತೆ ಸುತ್ತಾಡಿ ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಟ್ಯಾನಿ ಸರ್ಕಲ್‌, ಶಿವಾಜಿನಗರ, ಡಿಜೆಹಳ್ಳಿ, ಆರ್‌ಟಿನಗರ ಸುತ್ತಮುತ್ತ ಸಂಪೂರ್ಣ ಬಂದೋಬಸ್ತ್‌ ಮಾಡಲಾಗಿದೆ.

ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇನ್ನೂ ಈ ಘಟನೆ ಕಾರಣವಾಗಿರುವ ನವೀನ್ ಎಂಬಾತನನ್ನು ಬಂಧಿಸಲಾಗಿದೆ. ಕೆ.ಜಿ.ಹಳ್ಳಿ ಠಾಣೆಯಲ್ಲಿ ಆರೋಪಿ ನವೀನ್ ವಿಚಾರಣೆ ನಡೆಸಲಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಒಂದು ಸಮುದಾಯದ ಬಗ್ಗೆ ಅಹೇಳನಕಾರಿ ಪೋಸ್ಟ್ ಹಾಕಿರುವುದರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಅದರೆ ಆರೋಪಿ ನವೀನ್ ತನ್ನ ಫೇಸ್‍ಬುಕ್ ಖಾತೆ ಹ್ಯಾಕ್ ಆಗಿರುವುದಾಗಿ ಹೇಳಿಕೆ ನೀಡುವುದಾಗಿ ಹೇಳಿದ್ದಾನೆ.

ಇನ್ನೂ ಗಲಾಟೆ ಸಂಬಂಧಿಸಿದಂತೆ 110 ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.‌ಸದ್ಯ ಬೂದಿ ಮುಚ್ಚಿದ ಕೆಂಡದಂತೆ ಆಗಿರುವ ಪುಲಕೇಶಿ ನಗರ, ಕಾವಲ್ ಬೈರಸಂದ್ರ, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಕರ್ಫ್ಯೂ ಜಾರಿಗೊಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ 

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ  ಬೆಂಗಳೂರು: ರಾಜ್ಯದ...

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...