ರೋಹಿತ್ ನಾಯಕನಾಗಬೇಕೆಂದ ಪಾರ್ಥೀವ್..!
ಐಪಿಎಲ್‌ನಲ್ಲಿ ಮುಂಬೈ ತಂಡವನ್ನು ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ನಂತರ ಟೀಮ್ ಇಂಡಿಯಾದ ಸೀಮಿತ ಓವರ್‌ಗಳ ನಾಯಕತ್ವ ರೋಹಿತ್ ಶರ್ಮಾ ವಹಿಸಿಕೊಳ್ಳಬೇಕು ಎಂಬ ಕೂಗು ಜೋರಾಗಿದೆ. ಸಾಕಷ್ಟು ಮಾಜಿ ಕ್ರಿಕೆಟಿಗರು ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈಗ ಪಾರ್ಥಿವ್ ಪಟೇಲ್ ಕೂಡ ಇದೇ ಮಾತನ್ನು ಹೇಳಿದ್ದಾರೆ.
ಪಾರ್ಥೀವ್ ಪಟೇಲ್ ಬುಧವಾರ 18 ವರ್ಷಗಳ ವೃತ್ತಿ ಜೀವನದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗೆ ವಿದಾಯವನ್ನು ಹೇಳಿದ್ದಾರೆ. ಈ ನಿವೃತ್ತಿ ಘಓಷಣೆಯ ಬಳಿಕ ಪಾರ್ಥೀವ್ ರೋಹಿತ್ ಶರ್ಮಾಗೆ ನಾಯಕತ್ವ ಚರ್ಚೆಗೆ ತಮ್ಮ ಧ್ವನಿಗೂಡಿಸಿದ್ದಾರೆ.
ಪಾರ್ಥೀವ್ ಪಟೇಲ್ ಬುಧವಾರ 18 ವರ್ಷಗಳ ವೃತ್ತಿ ಜೀವನದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗೆ ವಿದಾಯವನ್ನು ಹೇಳಿದ್ದಾರೆ. ಈ ನಿವೃತ್ತಿ ಘಓಷಣೆಯ ಬಳಿಕ ಪಾರ್ಥೀವ್ ರೋಹಿತ್ ಶರ್ಮಾಗೆ ನಾಯಕತ್ವ ಚರ್ಚೆಗೆ ತಮ್ಮ ಧ್ವನಿಗೂಡಿಸಿದ್ದಾರೆ.
ರೋಹಿತ್ ಶರ್ಮಾಗೆ ಟೀಮ್ ಇಂಡಿಯಾದ ನಾಯಕತ್ವ ಕೊಡುವುದರಿಂದ ಕಳೆದುಕೊಳ್ಳುವುದು ಏನೂ ಇಲ್ಲ ಎಂದು ಪಾರ್ಥೀವ್ ಪಟೇಲ್ ಹೇಳಿದ್ದಾರೆ. ರೋಹಿತ್ ಶರ್ಮಾ ಆಡಲು ಫಿಟ್ ಆಗಿದ್ದರೆ ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್‌ನಲ್ಲಿ ಮುನ್ನಡೆಸಲು ಇದು ಉತ್ತಮವಾದ ಸಂದರ್ಭ. ಮುಂದಿನ ವರ್ಷ ನಡೆಯುವ ವಿಶ್ವಕಪ್‌ನ ದೃಷ್ಟಿಯಿಂದ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸಬೇಕು ಎಂದಿದ್ದಾರೆ.
ರೋಹಿತ್ ಶರ್ಮಾ ತಂಡವನ್ನು ಬೇಗೆ ಬೆಳೆಸಬೇಕೆಂದು ಕಲಿಸಿದ್ದಾರೆ. ಆತ ಟೂರ್ನಿಯನ್ನು ಹೇಗೆ ಗೆಲ್ಲುವುದು ಎಂಬುದನ್ನು ತಿಳಿಸಿದ್ದಾರೆ. ಒಂದು ಮಾದರಿಯಲ್ಲಿ ಆತನಿಗೆ ನಾಯಕತ್ವ ನೀಡುವುದರಿಂದ ಕಳೆದುಕೊಳ್ಳುವುದು ಏನೂ ಇಲ್ಲ ಎಂಬುದು ನನ್ನ ಭಾವನೆ. ಇದು ಕೊಹ್ಲಿಯ ಮೇಲಿರುವ ಭಾರವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಿದೆ” ಎಂದು ಪಾರ್ಥೀವ್ ಪಟೇಲ್ ಹೇಳಿದ್ದಾರೆ.
ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ಗಾಯದ ಕಾರಣದಿಂದ ಭಾರತ ತಂಡಕ್ಕೆ ಆಯ್ಕೆಯಾಗಿಲ್ಲ. ಆದರೆ ಟೆಸ್ಟ್ ತಂಡಕ್ಕೆ ಅಂತಿಮ ಕ್ಷಣದಲ್ಲಿ ರೋಹಿತ್ ಶರ್ಮಾ ಅವರನ್ನು ಹೆಸರಿಸಲಾಗಿದ್ದು ಅವರಿನ್ನೂ ಎನ್‌ಸಿಎನಲ್ಲಿ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಬೇಕಿದೆ. ಆದರೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಅವರು ಲಭ್ಯರಾಗಲಿದ್ದಾರೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ.
ಹೀಗಿದ್ದರೆ ಆರೋಗ್ಯದಿಂದ ಇರಬಹುದು..!
ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ, ಶುದ್ಧ ನೀರನ್ನು ಕುಡಿಯುವುದು, ಉತ್ತಮ ಆಹಾರ ಸೇವನೆ ಸೇರಿದಂತೆ ಸಾಕಷ್ಟು ವಿಚಾರಗಳು ಪ್ರಮುಖ ಪಾತ್ರವಹಿಸುತ್ತವೆ.
ಇವುಗಳನ್ನು ತಪ್ಪದೇ ಫಾಲೋ ಮಾಡಿ.
ಶೌಚಾಲಯಕ್ಕೆ ಹೋಗಿ ಬಂದ ನಂತರ, ಮಗುವಿನ ಡೈಪರ್ ಬದಲಾಯಿಸಿದ ನಂತರ ಮತ್ತು ಶೌಚಾಲಯಕ್ಕೆ ಹೋಗಲು ಮಗುವಿಗೆ ಸಹಾಯಮಾಡಿದ ನಂತರ, ಗಾಯಕ್ಕೆ ಔಷಧಿ ಹಚ್ಚುವ ಮುಂಚೆ ಮತ್ತು ನಂತರ,ಕಾಯಿಲೆ ಬಿದ್ದವರನ್ನು ಭೇಟಿಯಾಗುವ ಮುಂಚೆ ಮತ್ತು ನಂತರ, ಆಹಾರವನ್ನು ತಯಾರಿಸುವ, ಬಡಿಸುವ ಮತ್ತು ತಿನ್ನುವ ಮುಂಚೆ, ಕೆಮ್ಮಿದ, ಸೀನಿದ ಮತ್ತು ಮೂಗನ್ನು ಒರೆಸಿಕೊಂಡ ನಂತರ,
ಪ್ರಾಣಿಯನ್ನು ಅಥವಾ ಪ್ರಾಣಿಯ ತ್ಯಾಜ್ಯವನ್ನು ಮುಟ್ಟಿದ ನಂತರ ಕೈ ತೊಳೆಯುವುದನ್ನು ನೆಗ್ಲೇಟ್ ಮಾಡ್ಬೇಡಿ.
ನೀವು ಉಪಯೋಗಿಸುವ ನೀರು ಸುರಕ್ಷಿತ ಮೂಲದಿಂದ ಬರುತ್ತಿದೆಯಾ ಎಂದು ಖಚಿತಪಡಿಸಿಕೊಳ್ಳಿ. ಕೇವಲ ಕುಡಿಯುವ ನೀರು ಮಾತ್ರವಲ್ಲ ಅಡುಗೆ ಮಾಡಲು, ಹಲ್ಲು ಉಜ್ಜಲು, ತರಕಾರಿ ಮತ್ತು ಪಾತ್ರೆ ತೊಳೆಯಲು ಉಪಯೋಗಿಸುವ ನೀರು ಶುದ್ಧವಾಗಿದೆಯಾ ಎಂದೂ ನೋಡಬೇಕು. ಸರ್ಕಾರ ಒದಗಿಸುವ ಶುದ್ಧೀಕರಿಸಿದ ನೀರನ್ನು ಅಥವಾ ಶುದ್ಧತೆಗೆ ಹೆಸರುವಾಸಿಯಾದ ಕಂಪೆನಿಯ ಬಾಟಲಿ ನೀರನ್ನು ಉಪಯೋಗಿಸಿದರೆ ಒಳ್ಳೆಯದು.
ಕೊಳವೆಯ ನೀರು ಶುದ್ಧವಾಗಿಲ್ಲ ಎಂದು ನಿಮಗೆ ಅನಿಸಿದರೆ, ಆ ನೀರನ್ನು ಉಪಯೋಗಿಸುವ ಮುಂಚೆ ಚೆನ್ನಾಗಿ ಕುದಿಸಿ ಅಥವಾ ನೀರನ್ನು ರಾಸಾಯನಿಕದಿಂದ ಶುದ್ಧೀಕರಿಸಿ.
ಕ್ಲೋರಿನ್ ಅಥವಾ ನೀರನ್ನು ಶುದ್ಧೀಕರಿಸುವ ಇತರ ಕೆಮಿಕಲ್‌ಗಳನ್ನು ಉಪಯೋಗಿಸುವಾಗ ಅದರ ತಯಾರಕರ ನಿರ್ದೇಶನವನ್ನು ತಪ್ಪದೇ ಪಾಲಿಸಿ.
ಸಾಧ್ಯವಾದರೆ ಉತ್ತಮ ಗುಣಮಟ್ಟದ ವಾಟರ್ ಫಿಲ್ಟರ್‌ಗಳನ್ನು ಬಳಸಿ.
ಶುದ್ಧ ನೀರು ಕಲುಷಿತವಾಗದಂತೆ ಅದನ್ನು ಯಾವಾಗಲೂ ಸ್ವಚ್ಛವಾದ ಪಾತ್ರೆಯಲ್ಲಿ ಮುಚ್ಚಿಡಿ.
ನೀರನ್ನು ತೆಗೆದುಕೊಳ್ಳಲು ಉಪಯೋಗಿಸುವ ಎಲ್ಲ ಪಾತ್ರೆಗಳೂ ಶುದ್ಧವಾಗಿರುವಂತೆ ನೋಡಿಕೊಳ್ಳಿ.
ನೀರಿನ ಪಾತ್ರೆಯನ್ನು ಮುಟ್ಟುವ ಮುಂಚೆ ಕೈಗಳನ್ನು ತೊಳೆದುಕೊಳ್ಳಿ ಮತ್ತು ಕುಡಿಯುವ ನೀರಿನಲ್ಲಿ ನಿಮ್ಮ ಬೆರಳುಗಳನ್ನು ಅದ್ದಬೇಡಿ.
ತರಕಾರಿಗಳನ್ನು ಔಷಧಿ, ಗೊಬ್ಬರ ಉಪಯೋಗಿಸಿ ಬೆಳೆಸುತ್ತಾರೆ. ಆದ್ದರಿಂದ ನೀವು ತರಕಾರಿಗಳನ್ನು ಉಪಯೋಗಿಸುವಾಗ ಅವುಗಳನ್ನು ಚೆನ್ನಾಗಿ ತೊಳೆಯಿರಿ.
ಆಹಾರ ತಯಾರಿಸುವ ಮುಂಚೆ ತರಕಾರಿ ಹೆಚ್ಚುವ ಮಣೆ, ಪಾತ್ರೆ, ತಟ್ಟೆ ಮತ್ತು ನಿಮ್ಮ ಕೈಗಳಿಗೆ ಸೋಪು ಹಚ್ಚಿ ಬಿಸಿ ನೀರಿನಿಂದ ಚೆನ್ನಾಗಿ ತೊಳೆಯಿರಿ.
ಮೊಟ್ಟೆ, ಮಾಂಸ, ಮೀನನ್ನು ಇಟ್ಟ ಪಾತ್ರೆ ಅಥವಾ ಸ್ಥಳವನ್ನು ತೊಳೆದು ಶುದ್ಧ ಮಾಡಿದ ನಂತರವೇ ಆಹಾರ ಪದಾರ್ಥಗಳನ್ನು ಇಡಿ.
ಆಹಾರವನ್ನು ಚೆನ್ನಾಗಿ ಬೇಯಿಸಿ, ಬೇಗನೇ ಕೆಡುವಂಥ ಆಹಾರವನ್ನು ತಕ್ಷಣ ಬಳಸದೇ ಇದ್ದಲ್ಲಿ ಅದನ್ನು ಫ್ರಿಜ್ನಲ್ಲಿ ಇಡಿ.
ಬೇಗ ಕೆಡುವಂಥ ಆಹಾರ ಪದಾರ್ಥಗಳನ್ನು ಸಾಮಾನ್ಯ ಉಷ್ಣತೆಯಲ್ಲಿ ಎರಡಕ್ಕಿಂತ ಹೆಚ್ಚು ಗಂಟೆ ಇಟ್ಟರೆ ಅಥವಾ 32° ಸೆಲ್ಸಿಯಸ್‌ಕ್ಕಿಂತ ಹೆಚ್ಚು ಉಷ್ಣತೆಯಲ್ಲಿ ಒಂದು ಗಂಟೆ ಇಟ್ಟರೆ ಆ ಪದಾರ್ಥಗಳನ್ನು ಉಪಯೋಗಿಸಬೇಡಿ.
ವ್ಯಾಯಾಮ ಮಾಡಿ . ಇದರಿಂದ ನಿದ್ರೆ ಚೆನ್ನಾಗಿ ಬರುತ್ತದೆ.ದೈಹಿಕ ಮತ್ತು ಮಾನಸಿಕವಾಗಿ ಬಲಾಢ್ಯರಾಗುತ್ತೀರಿ.
ಅದೇರೀತಿ ಉತ್ತಮ ಆರೋಗ್ಯಕ್ಕೆ ನಿದ್ರೆ ಅಗತ್ಯ.