ರಾಜ್ಯದ್ಯಂತ ಇಂದು ಗ್ರಾಮ ಪಂಚಾಯತಿ ಮತ ಎಣಿಕೆ ನಡೆಯಿತು. ಎರಡೇ ಮತಎಣಿಕೆ ಕಾರ್ಯದ ವೇಳೆ ಗುಂಪು ಘರ್ಷಣೆ ಪರಸ್ಪರ ಗುದ್ದಾಟ ನಡೆದರೆ ಇಲ್ಲೊಂದು ಊರಿನಲ್ಲಿ ಮಾತ್ರ ಪಾಕಿಸ್ತಾನಕ್ಕೆ ಜೈಕಾರ ಕೇಳಿಬಂದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ಮತಎಣಿಕೆಯ ಕೇಂದ್ರದ ಮುಂಭಾಗದಲ್ಲಿ ಮಧ್ಯಾಹ್ನದ ವೇಳೆಗೆ ಪಾಕಿಸ್ತಾನಕ್ಕೆ ಜೈಕಾರದ ಸದ್ದು ಕೇಳಿ ಬಂದಿದೆ. ಇನ್ನು ಈ ರೀತಿ ಪಾಕಿಸ್ತಾನಕ್ಕೆ ಜೈಕಾರ ಹಾಕುವ ವೇಳೆ ಪೊಲೀಸರು ಸಹ ಅಲ್ಲಿಯೇ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಎಸ್ ಡಿ ಪಿ ಐ ಮತ್ತು ಬಿಜೆಪಿ ಕಾರ್ಯಕರ್ತರು ಮತ ಎಣಿಕೆ ಕೇಂದ್ರದ ಮುಂದೆ ಇದ್ದರು. ಈ ಸಂದರ್ಭದಲ್ಲಿ ಕೆಲ ಎಸ್ ಡಿ ಪಿ ಐ ನ ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆ ಕೂಗಿದರು ಎಂಬ ಆರೋಪ ವ್ಯಕ್ತವಾಗಿದೆ. ಮತ ಎಣಿಕೆ ಕೇಂದ್ರದ ಮುಂದೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗುತ್ತಿದ್ದಾಗ ಎಸ್ ಡಿ ಪಿ ಐ ನ ಕಾರ್ಯಕರ್ತರು ಇದಕ್ಕೆ ಬದಲಾಗಿ ಪಾಕಿಸ್ತಾನದ ಪರ ಘೋಷಣೆ ಕೂಗಿದರು ಎಂಬ ಆರೋಪ ಈಗ ಕೇಳಿ ಬರುತ್ತಿದೆ.
ಇನ್ನು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಡಿಯೋವನ್ನು ಪರಿಶೀಲಿಸಿದ ನಂತರ ಸರಿಯಾದ ಕವನ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.