ಬೆಂಗಳೂರಿನ ಒಟ್ಟು 28 ಮುಸ್ಲಿಂ ಸಂಘಟನೆಗಳು ಇದೇ ಜನವರಿ 22 ರಂದು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಹೌದು ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಯ ವಿಚಾರವಾಗಿ ಅಮಾಯಕ ಮುಸ್ಲಿಮರನ್ನು ಬಂಧಿಸಲಾಗಿದೆ, ಅವರನ್ನು ಬಿಡುಗಡೆ ಮಾಡಬೇಕು ಎಂದು ಮುಸ್ಲಿಂ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿವೆ.
ಇದಷ್ಟೇ ಅಲ್ಲದೆ ಕೃಷಿ ಕಾಯ್ದೆ ಮತ್ತು ಲವ್ ಜಿಹಾದ್ ಕಾನೂನಿನ ವಿರುದ್ಧ ಸಹ ಈ ಬಂದ್ ಆಚರಣೆ ಮಾಡಲಾಗುವುದು ಎಂಬ ಮಾಹಿತಿ ತಿಳಿದುಬಂದಿದೆ. ಬೆಂಗಳೂರಿನಲ್ಲಿರುವ ಮುಸ್ಲಿಂ ವ್ಯಾಪಾರಿಗಳು ಇದೇ ಜನವರಿ 22ರಂದು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಬೇಕು ಎಂದು ಒಟ್ಟು 28 ಮುಸ್ಲಿಂ ಸಂಘಟನೆಗಳು ಮನವಿ ಮಾಡಿವೆ..