ಕೋವಿಡ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಚಾಲನೆ – ಮೊದಲ ದಿನ 3 ಲಕ್ಷ ಮಂದಿಗೆ ಲಸಿಕೆ

Date:

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಹುನಿರೀಕ್ಷಿತ ಕೊರೊನಾ ಲಸಿಕೆ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಚಾಲನೆ ನೀಡಿ ಮಾತನಾಡಿದ ಅವರು, “ಈ ದಿನಕ್ಕಾಗಿ ದೇಶ ಕಾತರದಿಂದ ಕಾಯುತ್ತಿತ್ತು,” ಎಂದರು. ಲಸಿಕೆ ತಯಾರಿಸಲು ವರ್ಷಗಳು ಬೇಕಾಗುತ್ತವೆ. ಆದರೆ ಅತ್ಯಂತ ಕಡಿಮೆ ಅವಧಿಯಲ್ಲಿ, ಒಂದಲ್ಲ ಎರಡು ಮೇಡ್-ಇನ್ ಇಂಡಿಯಾ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದು ನಮ್ಮ ವಿಜ್ಞಾನಿಗಳ ಕೌಶಲ್ಯ ಮತ್ತು ಪ್ರತಿಭೆಗೆ ಸಾಕ್ಷಿಯಾಗಿದೆ ಎಂದು ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರಧಾನಿ, ಭಾರತೀಯರು ಕೊರೊನಾ ಲಸಿಕೆಗೆ ಸಂಬಂಧಿಸಿದ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಆಗ್ರಹಿಸಿದರು. ಭಾರತ್‌ ಬಯೋಟೆಕ್‌ನ ಕೊವಾಕ್ಸಿನ್‌ ಲಸಿಕೆಯ ಕ್ಲಿನಿಕಲ್‌ ಟ್ರಯಲ್‌ ಇನ್ನೂ ನಡೆಯುತ್ತಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

“ಎರಡು ಲಸಿಕೆಗಳ ದತ್ತಾಂಶವನ್ನು ಅವಲೋಕಿಸಿದ ನಂತರವೇ ಡಿಜಿಸಿಐ ಲಸಿಕೆಗೆ ಅನುಮೋದನೆ ನೀಡಿದೆ. ಆದ್ದರಿಂದ ವದಂತಿಗಳಿಂದ ದೂರವಿರಿ,” ಎಂದು ಪ್ರಧಾನಿ ಮನವಿ ಮಾಡಿದರು. “ನಮ್ಮ ಲಸಿಕೆ ತಯಾರಕರು ಜಾಗತಿಕ ವಿಶ್ವಾಸಾರ್ಹತೆಯನ್ನು ಹೊಂದಿದ್ದಾರೆ. ಜಾಗತಿಕವಾಗಿ 60% ಮಕ್ಕಳಿಗೆ ನೀಡಲಾಗುವ ಜೀವ ಉಳಿಸುವ ಲಸಿಕೆಗಳನ್ನು ಭಾರತದಲ್ಲಿ ತಯಾರಿಸಲಾಗುತ್ತದೆ. ಭಾರತದ ಲಸಿಕೆಗಳನ್ನು ದೇಶದ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ. ಅವು ನಮ್ಮ ದೇಶಕ್ಕೆ ನಿರ್ಣಾಯಕ ವಿಜಯವನ್ನು ನೀಡಲಿವೆ” ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

ಭಾರತದ ಲಸಿಕೆ ಅಭಿಯಾನವು ವಿಶ್ವದಲ್ಲೇ ಅತೀ ದೊಡ್ಡ ಅಭಿಯಾನವಾಗಿದ್ದು 3 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಕೊರೊನಾ ವಾರಿಯರ್ಸ್‌ಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದು ಪ್ರಧಾನಿ ವಿವರಿಸಿದ್ದಾರೆ.

ಈ ಅಭಿಯಾನಕ್ಕೆ ಆಸ್ಟ್ರಾಝೆನಿಕಾ ಮತ್ತು ಆಕ್ಸ್‌ಫರ್ಡ್‌ ತಯಾರಿಸಿರುವ ಲಸಿಕೆ ಹಾಗೂ ಭಾರತ್‌ ಬಯೋಟೆಕ್‌ನ ಕೋವಿಡ್‌ ಲಸಿಕೆಯನ್ನು ಬಳಸಲಾಗುತ್ತಿದೆ. ಮೊದಲ ದಿನವೇ 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ. ಇದು “ಕೊರೊನಾ ಅಂತ್ಯದ ಆರಂಭ” ಎಂದು ಆರೋಗ್ಯ ಸಚಿವ ಹರ್ಷವರ್ಧನ್‌ ಬಣ್ಣಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ದೇಶಾದ್ಯಂತ ಒಟ್ಟು 3,000 ಸ್ಥಳಗಳಲ್ಲಿ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಚಾಲನೆ ನೀಡಿದರು. ಪ್ರತೀ ಸ್ಥಳದಲ್ಲಿ ಕನಿಷ್ಠ 100 ಜನರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...