ಮೂರೇ ದಿನಗಳಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತಾ?

Date:

ಎಲ್ಲ ಅಡೆತಡೆಗಳು ದೂರವಾಗಿ ಕೊನೆಗೂ ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ. ರಾಮ ಹುಟ್ಟಿದ ನಾಡಿನಲ್ಲಿ ಇಡೀ ಭಾರತಕ್ಕೆ ಭಾರತವೇ ಕೊಂಡಾಡುವ ರೀತಿಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ. ಈ ನಿಟ್ಟಿನಲ್ಲಿ ಇಡೀ ಭಾರತದ ಮೂಲೆ ಮೂಲೆಯಿಂದ ದೇಣಿಗೆ ಸಂಗ್ರಹ ಕಾರ್ಯ ನಡೆಯುತ್ತಿದೆ.

ಈಗಾಗಲೇ ದೇಣಿಗೆ ಸಂಗ್ರಹ ಕಾರ್ಯಕ್ಕೆ ಚಾಲನೆ ಸಿಕ್ಕಿದ್ದು, ಕೇವಲ ಮೂರೇ ಮೂರು ದಿನದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ 100 ಕೋಟಿ ದೇಣಿಗೆ ಸಂಗ್ರಹವಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿರುವ ಅವರು, ಟ್ರಸ್ಟ್‌ಗೆ ಈವರೆಗೆ ಅಧಿಕೃತ ದತ್ತಾಂಶ ಲಭ್ಯವಾಗಿಲ್ಲ. ಆದರೆ ನಮ್ಮ ಕಾರ್ಯಕರ್ತರು ನೀಡಿರುವ ಮಾಹಿತಿಯ ಪ್ರಕಾರ ಈ ವರೆಗೂ ಸುಮಾರು 100 ಕೋಟಿ ರೂಪಾಯಿ ಸಂಗ್ರಹ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡುವ ಅಭಿಯಾನಕ್ಕೆ ಜ.15 ರಿಂದ ದೇಶಾದ್ಯಂತ ಚಾಲನೆ ನೀಡಲಾಗಿತ್ತು. ಈ ಅಭಿಯಾನ ಫೆ.27 ವರೆಗೆ ನಡೆಯಲಿದೆ. ಈ ಸಮಯದಲ್ಲಿ ದೇಶದ ಮೂಲೆ ಮೂಲೆಯಿಂದ ಜನರಿಂದ ದೇಣಿಗೆ ಸಂಗ್ರಹಿಸಲಾಗುತ್ತದೆ.

ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸ್ಥಾಪಿಸಲಾಗಿದ್ದು, ಇದರ ನೇತೃತ್ವದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಸದ್ಯ ಕಾಮಗಾರಿ ಆರಂಭವಾಗಿದ್ದು, 2024ರೊಳಗೆ ಭವ್ಯ ಮಂದಿರ ತಲೆ ಎತ್ತಲಿದೆ. ಈಗಾಗಲೇ ಮೊದಲ ದೇಣಿಗೆಯನ್ನು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೀಡಿದ್ದು, ಮಂದಿರ ನಿರ್ಮಾಣಕ್ಕಾಗಿ 5,00,100 ರೂಪಾಯಿಗಳ ದೇಣಿಗೆ ನೀಡಿದ್ದರು.

 

Share post:

Subscribe

spot_imgspot_img

Popular

More like this
Related

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್ ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ...

ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ

ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು...

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ!

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ! ಇತ್ತೀಚಿನ ದಿನಗಳಲ್ಲಿ ಚಳಿ ದಿನದಿಂದ...

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...