ಸೋಮವಾರನಗರದಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಭೀಮಪ್ಪ ಗಡಾದ, ಕೇಂದ್ರ ಸರಕಾರ ಹೊರಡಿಸಿದ ಕೊವೀಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಜನಸೇವಕ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ ಹಲವು ಮುಖಂಡರು ಪಾಲ್ಗೊಂಡಿದ್ದಾರೆಂದು ದೂರಿದರು.
ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ. ಅಲ್ಲದೆ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವುದು ಕಡ್ಡಾಯ.
ಆದರೆ, ಜನಸೇವಕ ಸಮಾವೇಶದಲ್ಲಿ ಇದ್ಯಾವುದನ್ನು ಪಾಲಿಸಿಲ್ಲ ಎಂದು ಗಡಾದ ಆರೋಪಿಸಿದರು.ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ ಸಚಿವರು, ಶಾಸಕರು ಸೇರಿದಂತೆ ಮುಖಂಡರ ವಿರುದ್ಧ ಕೂಡಲೇ ಎಫ್‍ಐಆರ್ ದಾಖಲು ಮಾಡದಿದ್ದರೆ ಹೈಕೋರ್ಟ್ ಮೆಟ್ಟಿಲೇರಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಭೀಮಪ್ಪ ಗಡಾದ ಎಚ್ಚರಿಕೆ ನೀಡಿದರು.