ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರುವ ವಿಚಾರ ನಿಮಗೆಲ್ಲರಿಗೂ ತಿಳಿದೇ ಇದೆ. ಹೀಗಾಗಿ ರಾಮಮಂದಿರ ನಿರ್ಮಾಣಕ್ಕೆ ಜನಸಾಮಾನ್ಯರು ಮತ್ತು ಸೆಲೆಬ್ರಿಟಿಗಳು ತಮ್ಮ ಕೈಲಾದಷ್ಟು ದೇಣಿಗೆಯನ್ನು ನೀಡುತ್ತಿದ್ದಾರೆ. ರಾಮಮಂದಿರಕ್ಕೆ ದೇಣಿಗೆಯೂ ಸಹ ತುಂಬಾ ಚೆನ್ನಾಗಿಯೇ ಬರುತ್ತಿದ್ದು ಸೆಲೆಬ್ರಿಟಿಗಳು ನಾಮುಂದು ತಾಮುಂದು ಎಂದು ದೊಡ್ಡ ಮೊತ್ತದ ದೇಣಿಗೆಗಳನ್ನು ಕೊಡಲು ಶುರುಮಾಡಿದ್ದಾರೆ.
ಮಾಜಿ ಕ್ರಿಕೆಟಿಗ ಮತ್ತು ಪ್ರಚಲಿತ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ರಾಮಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದ್ದಾರೆ. ಹೌದು ಗೌತಮ್ ಗಂಭೀರ್ ಅವರು ರಾಮಮಂದಿರ ನಿರ್ಮಾಣಕ್ಕೆ ಬರೋಬ್ಬರಿ ಒಂದು ಕೋಟಿ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.. ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಗೌತಮ್ ಗಂಭೀರ್ ಅವರು ನೀಡಿರುವ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.