ಪಂಜರದಿಂದ ಹೊರ ಬಂದ ರಾಗಿಣಿ..!

Date:

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ರಾಗಿಣಿ 144 ದಿನಗಳ ಬಳಿಕ ಪರಪ್ಪನ ಅಗ್ರಹಾರದ ಜೈಲಿನಿಂದ ಹೊರ ಬಂದಿದ್ದಾರೆ. ಜಾಮೀನು ಸಿಕ್ಕು ನಾಲ್ಕು ದಿನಗಳ ಬಳಿಕ ಇಂದು ರಿಲೀಸ್ ಆಗಿದ್ದಾರೆ.

ಗುರುವಾರ ಸುಪ್ರೀಂಕೋರ್ಟ್ ನ ನ್ಯಾ.ರೊಹಿಂಟನ್ ನಾರಿಮನ್ ತ್ರೀ ಸದಸ್ಯ ಪೀಠ ಜಾಮೀನು ನೀಡಿ ಆದೇಶಿಸಿತ್ತು. ಆದ್ರೆ ಜಾಮೀನು ಪ್ರಕ್ರಿಯೆ ತಡವಾದ ಹಿನ್ನೆಲೆ ಮತ್ತೆ ನಾಲ್ಕು ದಿನ ರಾಗಿಣಿ ಕಳೆಯುವಂತಾಗಿತ್ತು. ಜಾಮೀನು ಸಿಕ್ಕ ದಿನ ಮಾತನಾಡಿದ್ದ ರಾಗಿಣಿ ತಾಯಿ, ವಿಷಯ ಕೇಳಿ ಸಂತಸವಾಯ್ತು. ಇವತ್ತು ನಮಗೆ ಲಕ್ಕಿ ಡೇ ಎಂದು ಸಂತೋಷ ಹಂಚಿಕೊಂಡಿದ್ದರು.

ಪ್ರಕರಣದ ಹಿನ್ನೆಲೆ:
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಸೆಪ್ಟೆಂಬರ್ 4 ರಂದು ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಸಂಜನಾ ಗಲ್ರಾನಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ರಾಗಿಣಿಗೆ ಇದೀಗ ಬರೋಬ್ಬರಿ 140 ದಿನಗಳ ಬಳಿಕ ರಾಗಿಣಿಗೂ ಜಾಮೀನು ಸಿಕ್ಕಿದೆ. ಸುದೀರ್ಘ ವಿಚಾರಣೆ ನಡೆಸಿದ ನ್ಯಾ.ರೊಹಿಂಗ್ಟನ್‌ ನಾರಿಮನ್ ತ್ರೀ ಸದಸ್ಯ ಪೀಠ ಜಾಮೀನು ನೀಡಿ ಆದೇಶಿಸಿತ್ತು.

ರಾಗಿಣಿ ಕಳೆದ 140 ದಿನಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣದಲ್ಲಿ ಯಾವುದೇ ಬೆಳವಣಿಗೆಗಳಿಲ್ಲ. ರಾಗಿಣಿ ಮನೆಯಲ್ಲಿ ಯಾವುದೇ ಡ್ರಗ್ ವಶಪಡಿಸಿಕೊಂಡಿಲ್ಲ ಮತ್ತು ಸೇವಿಸಿಲ್ಲ. ಕೇವಲ ಆರೋಪಿ ರವಿಶಂಕರ್ ಹೇಳಿಕೆಯನ್ನಾಧರಿಸಿ ರಾಗಿಣಿಯನ್ನು ಬಂಧಿಸಲಾಗಿತ್ತು. ಈಗಾಗಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರಿಗೆ ಜಾಮೀನು ಸಿಕ್ಕಿದೆ. ಹಾಗಾಗಿ ಜಾಮೀನು ನೀಡಬೇಕೆಂದು ರಾಗಿಣಿ ಪರ ವಕೀಲ ಸಿದಾರ್ಥ ಲೂಥ್ರಾ ವಾದ ಮಂಡಿಸಿದ್ದರು.

ಡ್ರಗ್ ಪತ್ತೆಹಚ್ಚಲು ಲ್ಯಾಬ್ ಫಲಿತಾಂಶಗಳನ್ನು ಹಾಳುಮಾಡುವ ಪ್ರಯತ್ನದಲ್ಲಿ ದ್ವಿವೇದಿ ನೀರನ್ನು ಮೂತ್ರದ ಮಾದರಿಯೊಂದಿಗೆ ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ರೀತಿಯ ಯಾವುದೇ ಬೆಳವಣಿಗೆ ಆಗಿಲ್ಲ. ಪ್ರಕರಣ ಇತರೆ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂಬ ಅಂಶಗಳು ಲೂಥ್ರಾ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

 

 

Share post:

Subscribe

spot_imgspot_img

Popular

More like this
Related

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನವದೆಹಲಿ:ಕಲ್ಯಾಣ...

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್

ಈರುಳ್ಳಿ ಕತ್ತರಿಸುವಾಗ ಕಣೀರು ಬರುತ್ತಾ? ಈ ಕಣ್ಣೀರನ್ನು ತಡೆಯಲು ಇಲ್ಲಿದೆ ಟಿಪ್ಸ್ ಅಡುಗೆ...

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ !

ನವರಾತ್ರಿ ಏಳನೇ ದಿನಈ ದಿನ ಕಾಳರಾತ್ರಿ ದೇವಿಯನ್ನು ಆರಾಧಿಸಲಾಗುತ್ತದೆ ! ದೇವಿಯ ಹಿನ್ನಲೆ ಕಾಳರಾತ್ರಿ...