ನಟಿ ಶ್ರುತಿ ಹಾಸನ್ ತೆಲುಗು, ತಮಿಳು & ಹಿಂದಿ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ನಟಿ. ಆದರೆ ಕನ್ನಡ ಸಿನಿಮಾಗಳಲ್ಲಿ ಮಾತ್ರ ಇದುವರೆಗೂ ಅಭಿನಯಿಸಿಲ್ಲ. ಆಗಾಗ ನಟಿ ಶೃತಿ ಹಾಸನ್ ಕನ್ನಡದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಹೀಗೆ ಒಮ್ಮೆ ನಟಿ ಶ್ರುತಿ ಹಾಸನ್ ಕನ್ನಡ ಸಿನಿಮಾವೊಂದರಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಸಂದರ್ಭದಲ್ಲಿ ಸ್ವತಃ ನಟಿ ಶೃತಿ ಹಾಸನ್ ನಾನು ಯಾವುದೇ ಕನ್ನಡ ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ, ಕನ್ನಡ ಸಿನಿಮಾಗಳಲ್ಲಿ ಅಭಿನಯಿಸುವ ಯೋಚನೆಯೂ ಇಲ್ಲ ಎಂದು ಟ್ವೀಟ್ ಮಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.
ಆದರೆ ಇದೀಗ ನಟಿ ಶೃತಿ ಹಾಸನ್ ಸಲಾರ್ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇಂದು ಶೃತಿ ಹಾಸನ್ ಹುಟ್ಟುಹಬ್ಬದ ಪ್ರಯುಕ್ತ ಸಲಾರ್ ಚಿತ್ರತಂಡ ಶೃತಿ ಹಾಸನ್ ನಾಯಕಿಯಾಗಿ ಅಭಿನಯಿಸುತ್ತಿರುವ ವಿಷಯವನ್ನು ಬಹಿರಂಗಪಡಿಸಿತು. ಈ ವಿಷಯ ತಿಳಿಯುತ್ತಿದ್ದಂತೆ ನಟಿ ಶೃತಿ ಹಾಸನ್ ಅವರನ್ನು ಕನ್ನಡಿಗರು ಟ್ರೋಲ್ ಮಾಡಲು ಆರಂಭಿಸಿದ್ದಾರೆ.
ಈ ಹಿಂದೆ ಕನ್ನಡ ಚಿತ್ರದಲ್ಲಿ ಅಭಿನಯಿಸುವುದಿಲ್ಲ ಎಂದಿದ್ದ ಈಕೆ ಇವಾಗ ಯಾಕೆ ಕನ್ನಡ ಸಿನಿಮಾದಲ್ಲಿ ಅಭಿನಯಿಸಲು ತಯಾರಾಗಿದ್ದಾಳೆ ಎಂದು ಕಾಲೆಳೆಯುತ್ತಿದ್ದಾರೆ. ಹೌದು ಪ್ರಶಾಂತ್ ನೀಲ್ ನಿರ್ದೇಶನ ಮಾಡ್ತಾ ಇರೋ ಸಲಾರ್ ಮೂಲತಃ ಕನ್ನಡ ಸಿನಿಮಾನೇ.. ಹೀಗಾಗಿ ಕನ್ನಡ ಸಿನಿಮಾದಲ್ಲಿ ಅಭಿನಯಿಸಲು ಬರ್ತಾ ಇರೋ ಶ್ರುತಿ ಹಾಸನ್ ಕುರಿತು ಕನ್ನಡಿಗರು ಟ್ರೋಲ್ ಮಾಡುತ್ತಿದ್ದಾರೆ.