ರೈತರ ಪರ ಧ್ವನಿ ಎತ್ತಿದ ನೀಲಿಚಿತ್ರ ತಾರೆ

Date:

ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಜಗತ್ತಿನಾದ್ಯಂತ ಇರುವ ಸೆಲೆಬ್ರಿಟಿಗಳು ಮಾತನಾಡುತ್ತಿದ್ದಾರೆ. ರೈತರ ಪರವಾಗಿ ಖ್ಯಾತ ಪಾಪ್‌ ಗಾಯಕಿ ರಿಯಾನಾ ಅವರು ಟ್ವೀಟ್‌ ಮಾಡಿದ ಬೆನ್ನಲ್ಲೇ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಕೂಡ ತಮ್ಮ ಧ್ವನಿ ಎತ್ತಿದ್ದಾರೆ.
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲಾಗಿತ್ತು ಎಂಬ ವಿಚಾರವೇ ಈಗ ಹೆಚ್ಚು ಚರ್ಚೆಗೆ ಕಾರಣ ಆಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದ ಸುದ್ದಿಯನ್ನು ರಿಯಾನಾ ಕೂಡ ಶೇರ್‌ ಮಾಡಿಕೊಂಡಿದ್ದರು. ಮಿಯಾ ಖಲಿಫಾ ಸಹ ಇದನ್ನೇ ಪ್ರಶ್ನಿಸಿದ್ದಾರೆ. ಈ ಕುರಿತು ಅವರು ಸರಣಿ ಟ್ವೀಟ್‌ ಮಾಡಿದ್ದಾರೆ. ರೈತರಿಗೆ ತಮ್ಮ ಬೆಂಬಲ ಇದೆ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.
ದೆಹಲಿಯ ರಸ್ತೆಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿರುವ ಫೋಟೋವನ್ನು ಮಿಯಾ ಖಲೀಫಾ ಶೇರ್‌ ಮಾಡಿಕೊಂಡಿದ್ದಾರೆ. ‘ಮಾನವ ಹಕ್ಕುಗಳ ಉಲ್ಲಂಘನೆ ಮಾಡುವುದರ ಜೊತೆ ಏನು ನಡೆಯುತ್ತಿದೆ? ದೆಹಲಿ ಸುತ್ತಮುತ್ತ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲಾಯಿತಾ?’ ಎಂದು ಪ್ರಶ್ನಿಸಿ ಮಿಯಾ ಟ್ವೀಟ್‌ ಮಾಡಿದ್ದಾರೆ. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ ಕೂಡ ಬಳಸಿದ್ದಾರೆ. ಅವರ ಟ್ವೀಟ್‌ಗೆ ಬಗೆಬಗೆಯಲ್ಲಿ ಕಾಮೆಂಟ್‌ ಬಂದಿದೆ.
ಇನ್ನು, ನೀಲಿ ಸಿನಿಮಾಗಳ ಲೋಕದಲ್ಲಿ ಮಿಯಾ ಖಲಿಫಾ ಹೆಸರು ಸಿಕ್ಕಾಪಟ್ಟೆ ಫೇಮಸ್‌. ಆದರೆ ಅವರೀಗ ಆ ವೃತ್ತಿಯಿಂದ ಹೊರಬಂದಿದ್ದಾರೆ. ಅಂತಹ ಮಾಜಿ ನೀಲಿ ತಾರೆಯು ರೈತರ ಹೋರಾಟದ ಬಗ್ಗೆ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಅನೇಕ ನೆಟ್ಟಿಗರು ಗೇಲಿ ಮಾಡುತ್ತಿದ್ದಾರೆ. ಮಿಯಾರನ್ನು ವ್ಯಂಗ್ಯ ಮಾಡುವಂತಹ ಕಾಮೆಂಟ್‌ಗಳು ಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...