ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಾಳೆ ದಾವಣಗೆರೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ವೇದಿಕೆ ಮೇಲೆ ತುಂಬ ವರ್ಷಗಳಿಂದ ಕಾಣಿಸಿಕೊಳ್ಳದ ಇಬ್ಬರು ಸ್ಟಾರ್ ಗಳನ್ನು ಸೇರಿಸುವುದಾಗಿ ಪೊಗರು ಚಿತ್ರತಂಡ ಹೇಳಿತ್ತು.
ಇನ್ನು ಈ ಹೇಳಿಕೆ ಬೆನ್ನಲ್ಲೇ ಹಲವಾರು ಊಹಾಪೋಹಗಳು ಹುಟ್ಟಿಕೊಂಡಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸುದೀಪ್ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಹೌದು ದರ್ಶನ್ ಮತ್ತು ಸುದೀಪ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಹಲವಾರು ವರ್ಷಗಳಾಗಿದ್ದವು ಈ ಕಾರಣದಿಂದ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಡಿತ್ತು.
ಆದರೆ ಇದೀಗ ಬಂದಿರುವ ಸುದ್ದಿಯ ಪ್ರಕಾರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪೊಗರು ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಬರುತ್ತಿರುವ ಸ್ಟಾರ್ ಗಳು ಎನ್ನಲಾಗುತ್ತಿದೆ. ಹೌದು ಈ ಇಬ್ಬರು ಸ್ಟಾರ್ ನಟರು ಒಂದೇ ವೇದಿಕೆ ಮೇಲೆ ಸೇರಿ ಹಲವಾರು ವರ್ಷಗಳೇ ಕಳೆದಿವೆ. ಹೀಗಾಗಿ ಪೊಗರು ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಬರುತ್ತಿರುವುದು ಈ ಇಬ್ಬರು ನಟರು ಎಂಬ ಸುದ್ದಿ ಇದೆ.. ಇನ್ನು ಪುನೀತ್ ಮತ್ತು ದರ್ಶನ್ ಒಟ್ಟಿಗೆ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು ಕಡೆಯದಾಗಿ ಡಬ್ಬಿಂಗ್ ವಿರುದ್ಧದ ಹೋರಾಟ ನಡೆದಾಗ…