ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ಗೆ ಸಂಕಷ್ಟ ಎದುರಾಗಿದ್ದು, ಹರಿಯಾಣ ಪೊಲೀಸರು ಯುವಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ರೋಹಿತ್ ಶರ್ಮಾ ಜತೆಗಿನ ಇನ್ಸ್ಟಾಗ್ರಾಂ ಲೈವ್ ಚರ್ಚೆಯಲ್ಲಿ ಯುವರಾಜ್ ಜಾತಿವಾದಿ ಕಾಮೆಂಟ್ ಮಾಡಿರುವ ಆರೋಪವಿದೆ. ಅಲ್ಲದೆ, ಕ್ಷಮೆಯನ್ನು ಕೇಳಿರುವ ಯುವಿ, ನಾನೆಂದಿಗೂ ಅಸಮಾನತೆಯನ್ನು ನಂಬುವುದಿಲ್ಲ ಎಂದಿದ್ದಾರೆ.
ಉದ್ಧೇಶಪೂರ್ವಕವಲ್ಲದೆ ಒಂದು ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಈ ಹಿಂದೆಯೇ ಯುವಿ ಟ್ವೀಟ್ ಮಾಡಿದ್ದರು. ಯಾವುದೇ ರೀತಿಯ ಅಸಮಾನತೆಯನ್ನು ನಾನು ನಂಬುವುದಿಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ. ಬಣ್ಣ, ಜಾತಿ, ಧರ್ಮ ಅಥವಾ ಲಿಂಗ ಯಾವುದೇ ಇರಲಿ ತಾರತಮ್ಯ ಮಾಡುವುದಿಲ್ಲ. ಜನರ ಕಲ್ಯಾಣಕ್ಕಾಗಿ ನನ್ನ ಜೀವನವನ್ನು ನಿರಂತರವಾಗಿ ಮುಡಿಪಾಗಿಡುತ್ತೇನೆ ಎಂದಿದ್ರು ಯುವಿ