ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು 13 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆ ಜರುಗಿತು. ಇದೇ ಸಂದರ್ಭದಲ್ಲಿ ಅವರು ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ದೇಶಕ ಡಿ.ಆರ್.ಜೈರಾಜ್, ಹಿರಿಯ ಕಲಾವಿದರಾದ ಶ್ರುತಿ, ತಾರಾ ಅನುರಾಧಾ, ಚಲನಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಆಯುಕ್ತ ಪಿ.ಎಸ್.ಹರ್ಷ ಉಪಸ್ಥಿತರಿದ್ದರು