ಜಿಲೆಟಿನ್ ಸ್ಪೋಟ ಸಂಭವಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕಾರಣಗಳೇನು ಎಂಬುದರ ಕುರಿತು ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿದರು.
ಹಿರೇನಾಗವಲ್ಲಿ ಬಳಿ ಜಿಲೆಟಿನ್ ಸ್ಪೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯರ ಅಧಿಕಾರಿಗಳಿಗೆ ಮಾಹಿತಿ ಪಡೆಯಲಾಗುತ್ತಿದ್ದು ಪ್ರಕರಣ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದ್ದು ಪ್ರಕರಣ ಸಂಪೂರ್ಣ ತನಿಖೆ ನಡೆಸಿ ತಪ್ಪಿತ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ