ದೇಶದಾದ್ಯಂತ ಕೊರೊನಾ ಎರಡನೆಯ ಅಲೆ ಎದ್ದಂತೆ ಕಾಣಿಸುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ದೇಶದಾದ್ಯಂತ ಖುರಾನಾ ಸೋಂಕಿತರ ಸಂಖ್ಯೆ 31% ಅಧಿಕವಾಗಿದೆ. ಇನ್ನೂ ಕೊರೊನಾ ಸೋಂಕಿತರ ಸಂಖ್ಯೆ ಇಷ್ಟು ಮಟ್ಟದಲ್ಲಿ ಬೆಳೆಯುತ್ತಿರುವುದನ್ನು ಗಮನಿಸಿದರೆ ಮತ್ತೆ ಜನರು ಇಕ್ಕಟ್ಟಿಗೆ ಸಿಲುಕುವುದು ಪಕ್ಕಾ ಎನ್ನಲಾಗುತ್ತಿದೆ.
ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದ ಕರ್ನಾಟಕಕ್ಕೆ ತೊಂದರೆ ಕಟ್ಟಿಟ್ಟ ಬುತ್ತಿ. ಹೀಗಾಗಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಬಾರ್ಡರ್ ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನೂ ಬೆಂಗಳೂರಿನಲ್ಲಿಯೂ ಸಹ ಕೊರೊನಾ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಾಗುತ್ತಿದೆ.
ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಗಮನಿಸಿ ಆತಂಕ ವ್ಯಕ್ತಪಡಿಸಿರುವ ಬಿಬಿಎಂಪಿ ಆಯುಕ್ತರು ಇದೀಗ ಜನರಿಗೆ ಸಂದೇಶವನ್ನು ನೀಡಿದ್ದಾರೆ. ಕರುಣಾ ಸೋಂಕಿತರ ಸಂಖ್ಯೆ ಇದೇ ರೀತಿ ಹೆಚ್ಚಾದರೆ ಒಂದೇ ರಸ್ತೆಯಲ್ಲಿ 5 ಸೋಂಕಿತರು ಕಂಡು ಬಂದರೆ ಅದನ್ನು ಕಂಟೈನ್ ಮೆಂಟ್ ಜ಼ೋನ್ ಎಂದು ಪರಿಗಣಿಸಲಾಗುವುದು ಎಂದು ಹೇಳಲಾಗಿದೆ.
ಅಷ್ಟು ಮಾತ್ರವಲ್ಲದೆ ಇನ್ನೂ ಹೆಚ್ಚು ಸೋಂಕಿತರು ಕಂಡು ಬಂದರೆ ಈ ಹಿಂದಿನಂತೆ ಲಾಕ್ ಡೌನ್ ಮಾಡದೆ ಬೇರೆ ದಾರಿ ಇಲ್ಲ ಎಂದು ಸಹ ಇದೇ ವೇಳೆ ಬಿಬಿಎಂಪಿ ತಿಳಿಸಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ನಮ್ಮ ರಕ್ಷಣೆಯಲ್ಲಿ ನಾವು ಇರುವುದು ಒಳ್ಳೆಯದು.