SSLC ಅಂತಿಮ ವೇಳಾಪಟ್ಟಿ ಪ್ರಕಟ

Date:

ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಈ ಪರೀಕ್ಷೆಗಳು ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.

ಕಳೆದ ತಿಂಗಳು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಅವರು ಶಿಕ್ಷಣ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಬಿಡುಗಡೆ ಮಾಡಲಾದ ಅಂತಿಮ ವೇಳಾಪಟ್ಟಿಯ ಪ್ರಕಾರ ಈ ಕೆಳಗಿನಂತೆ ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಯಲಿವೆ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಬಿಡುಗಡೆ ಮಾಡಲಾದ ಅಂತಿಮ ವೇಳಾಪಟ್ಟಿಯ ಪ್ರಕಾರ ಈ ಕೆಳಗಿನಂತೆ ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಯಲಿವೆ.

ಜೂನ್ 21 – ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆ ನಡೆಯಲಿವೆ.

ಜೂನ್ 24 – ಗಣಿತ

ಜೂನ್ 28 – ವಿಜ್ಞಾನ

ಜೂನ್ 30 – ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಭಾಷೆ ಪರೀಕ್ಷೆ ನಡೆಯಲಿವೆ.

ಜುಲೈ 2 – ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ.

ಜುಲೈ 5- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

 

 

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...