ಏ.9 ರಿಂದ ಮೇ .30ರವರೆಗೆ IPL

Date:

ನವದೆಹಲಿ: ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದ್ದು, ಏಪ್ರಿಲ್ 9ರಿಂದ ಮೇ 30ರ ವರೆಗೆ ಐಪಿಎಲ್ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಲ್ಲೂ ಪಂದ್ಯಗಳು ನಡೆಯಲಿವೆ ಎಂದು ವರದಿಯಾಗಿದೆ.

ಐಪಿಎಲ್‍ನ 2021ನೇ ಆವೃತ್ತಿ ಭಾರತದಲ್ಲೇ ನಡೆಯಲಿದ್ದು, ಏಪ್ರಿಲ್ 9ರಿಂದ ಪಂದ್ಯ ಆರಂಭವಾಗುವ ನಿರೀಕ್ಷೆ ಇದೆ. ಕಳೆದ ಬಾರಿ ಯುಎಇಯಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲಾಗಿತ್ತು. ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರೀಡಾಂಗಣಗಳಲ್ಲಿ ಐಪಿಎಲ್ ಪಂದ್ಯಗಳು ನಡೆದಿದ್ದವು. ಆದರೆ ಈ ಬಾರಿ ಭಾರತದಲ್ಲೇ ನಡೆಯುತ್ತಿವೆ.

ಬೆಂಗಳೂರು, ಚೆನ್ನೈ, ಅಹ್ಮದಾಬಾದ್, ದೆಹಲಿ, ಕೋಲ್ಕತ್ತಾ ಹಾಗೂ ಮುಂಬೈ ಒಟ್ಟು 6 ಸ್ಥಳಗಳಲ್ಲಿ ನಡೆಯಲಿದ್ದು, ಏಪ್ರಿಲ್ 9ರಿಂದ ಮೇ 30ರ ವರೆಗೆ 52 ದಿನಗಳ ಕಾಲ ಒಟ್ಟು 60 ಪಂದ್ಯಗಳು ನಡೆಯಲಿವೆ ಎನ್ನಲಾಗಿದೆ.

ಬಿಸಿಸಿಐ ಈಗಾಗಲೇ ದೇಶೀಯ ಪಂದ್ಯಾವಳಿಗಳಾದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಹಾಗೂ ವಿಜಯ್ ಹಜಾರೆ ಟ್ರೋಫಿಗಳನ್ನು ಕೊರೊನಾ ನಡುವೆ ಯಶಸ್ವಿಯಾಗಿ ನಡೆಸಿದೆ. ಅಲ್ಲದೆ ಭಾರತ- ಇಂಗ್ಲೆಂಡ್ ಸರಣಿ ನಡೆಸಲು ಸಹ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿ ಐಪಿಎಲ್‍ನ್ನು ಸಹ ನಡೆಸಲಿದೆ ಎನ್ನಲಾಗಿದೆ.

ಪಂದ್ಯ ನಡೆಯುತ್ತಿರುವ 6 ಸ್ಥಳಗಳಲ್ಲಿ ಸೂಕ್ತ ಮುಂಜಾಗ್ರತೆ ಕೈಗೊಳ್ಳಲಾಗುತ್ತದೆ. ಅಲ್ಲದೆ ಒಟ್ಟು 8 ತಂಡಗಳ ಆಟಗಾರರನ್ನು ಬಯೋ ಬಬಲ್ಸ್ ನಲ್ಲಿ ಇರಿಸಲಾಗುತ್ತಿದೆ. ಎಲ್ಲ 6 ಕ್ರೀಡಾಂಗಣಗಳಲ್ಲಿ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಹೀಗಾಗಿ ಕ್ರೀಡಾಂಗಣಗಳು ರಂಗೇರಲಿವೆ ಎಂದು ವರದಿಯಾಗಿದೆ. ಕಳೆದ ಬಾರಿ ಯುಎಇಯಲ್ಲಿ ನಡೆದ ಪಂದ್ಯಗಳಲ್ಲಿ ಅಭಿಮಾನಿಗಳಿಗೆ ಪ್ರವೇಶ ಕಲ್ಪಿಸಿರಲಿಲ್ಲ. ಐಪಿಎಲ್ 2021ರ ಆವೃತ್ತಿಗೆ ಆಟಗಾರರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೇನು ಸಿದ್ಧತೆ ಮಾತ್ರ ಬಾಕಿ ಉಳಿದಿದೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...