ವಾಮಮಾರ್ಗದ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿ ಕಿರುಕುಳ ನೀಡುತ್ತಿದೆ. ತಮ್ಮ ಪಕ್ಷದ ಶಾಸಕರು ಮಹಿಳೆಯರ ಮೇಲೆ ಹಲ್ಲೆ ಮಾಡಿ ಗರ್ಭಪಾತಕ್ಕೆ ಕಾರಣವಾದಾಗ ಮೌನವಾಗಿದ್ದರು.ಕೊರೊನಾ ಸಮಯದಲ್ಲಿ ಕೋಮು ದ್ವೇಷದ ಹೇಳಿಕೆ ಕೊಟ್ಟಾಗಲೂ ಕಣ್ಣು, ಕಿವಿ ಮುಚ್ಚಿಕೊಂಡಿತ್ತು.ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ತಮ್ಮ ಪಕ್ಷದವರು ಅಕ್ರಮ ಗಣಿಗಾರಿಕೆ, ಜಿಲೇಟಿನ್ ಸ್ಫೋಟ ಮಾಡಿದ್ದರು ಕೈಕಟ್ಟಿ ಕುಳಿತಿತ್ತು.
ಆದರೆ ಯಾವುದೇ ತಪ್ಪು ಮಾಡದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ.ಭದ್ರಾವತಿ ಶಾಸಕ ಸಂಗಮೇಶ್ ಸೇರಿ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರ ರಕ್ಷಣೆಗೆ ನಿಲ್ಲಲು ಕಾಂಗ್ರೆಸ್ ಪಕ್ಷ ಶಿವಮೊಗ್ಗದಲ್ಲಿ ಇದೇ 13ರಂದು ಮಧ್ಯಾಹ್ನ1 ಗಂಟೆಗೆ ‘ಶಿವಮೊಗ್ಗ ಚಲೋ’ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಪಕ್ಷದ ಎಲ್ಲ ಹಿರಿಯ ನಾಯಕರು, ಶಾಸಕರು, ಮುಖಂಡರು ಭಾಗವಹಿಸಲಿದ್ದು, ನೀವು ಈ ಹೋರಾಟದಲ್ಲಿ ಭಾಗವಹಿಸಿ ಎಂದು
ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.