No menu items!
10.8 C
Munich
Wednesday, April 29, 2026

ಸಾವಿರ ಗಡಿಯತ್ತ ಕೊರೋನಾ ರಣಕೇಕೆ

Must read

ಬೆಂಗಳೂರು: ಇಂದು ರಾಜ್ಯದಲ್ಲಿ 921 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 992 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು ಕೇವಲ ಒಬ್ಬರು ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,387ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿತರ ಸಂಖ್ಯೆ 9,59,338ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 8,042 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 123 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.26 ಮತ್ತು ಮರಣ ಪ್ರಮಾಣ ಶೇ.0.10ರಷ್ಟು ದಾಖಲಾಗಿದೆ. ಇಂದು 72,650 ಸ್ಯಾಂಪಲ್ ಗಳನ್ನ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಕೊರೊನಾ ವಾರಿಯರ್ಸ್ ಹಾಗೂ ಹಿರಿಯ ನಾಗರಿಕರು ಸೇರಿ ಒಟ್ಟು 39,253 ಜನ ಕೊರೊನಾ ಲಸಿಕೆ ಪಡೆದಿದ್ದಾರೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 4, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 630, ಬೀದರ್ 15, ಚಾಮರಾಜನಗರ 0, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 1, ಚಿತ್ರದುರ್ಗ 4, ದಕ್ಷಿಣ ಕನ್ನಡ 43, ದಾವಣಗೆರೆ 5, ಧಾರವಾಡ 10, ಗದಗ 4, ಹಾಸನ 11, ಹಾವೇರಿ 0, ಕಲಬುರಗಿ 35, ಕೊಡಗು 5, ಕೋಲಾರ 3, ಕೊಪ್ಪಳ 0, ಮಂಡ್ಯ 3, ಮೈಸೂರು 47, ರಾಯಚೂರು 1, ರಾಮನಗರ 0, ಶಿವಮೊಗ್ಗ 7, ತುಮಕೂರು 38, ಉಡುಪಿ 13, ಉತ್ತರ ಕನ್ನಡ 5, ವಿಜಯಪುರ 8 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article