ಹೊಸದಿಲ್ಲಿ: ದೇಶದ ಕೆಲವು ರಾಜ್ಯಗಳಲ್ಲಿ ಮಾರಕ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ತುರ್ತು ಸಭೆ ಕರೆದಿದ್ದಾರೆ.
ಇದೇ ಮಾ.17(ಬುಧವಾರ)ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದ್ದು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಪ್ರಮುಖವಾಗಿ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಾಗಶಃ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲೂ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚಿಂತನೆ ನಡೆಸುತ್ತಿದೆ.
ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಿರುವಂತೆ ಕೈಗೊಳ್ಳಬಹುದಾದ ಕ್ರಮಗಲು ಹಾಗೂ ಕೊರೊನಾ ಅಲೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವ ಕುರಿತು ಪ್ರಧಾನಿ ಮೋದಿ ದೇಶದ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.