ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ ಟ್ವೆಂಟಿ ಪಂದ್ಯ ನಡೆಯುತ್ತಿದೆ. ಇಂಗ್ಲೆಂಡ್ ವಿರುದ್ಧದ ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಕಳಪೆ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿ ಅವರ ವಿರುದ್ಧ ಸಾಲು ಸಾಲು ಟ್ರೋಲ್ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗಿತ್ತು.
ಅಷ್ಟು ಮಾತ್ರ ಅಲ್ಲದೆ ಕಳೆದ ಕೆಲ ತಿಂಗಳುಗಳಿಂದ ವಿರಾಟ್ ಕೊಹ್ಲಿ ಅವರು ಬ್ಯಾಡ್ ಫಾರ್ಮ್ ನಲ್ಲಿ ಇರುವುದನ್ನು ಸಹ ನೆಟ್ಟಿಗರು ಟ್ರೋಲ್ ಮಾಡತೊಡಗಿದ್ದರು. ವಿರಾಟ್ ಕೊಹ್ಲಿ ಕಂಬ್ಯಾಕ್ ಮಾಡುವುದು ಕಷ್ಟ ಅವರು ತೀರಾ ಕೆಳಮಟ್ಟದ ಪ್ರದರ್ಶನ ತೋರುತ್ತಿದ್ದಾರೆ ಎಂದೆಲ್ಲ ಸಮಾಜಿಕ ಜಾಲ ತಾಣದಲ್ಲಿ ಚರ್ಚೆಗಳು ಆಗುತ್ತಿದ್ದವು.
ಅದಕ್ಕೆ ತಿರುಗೇಟು ನೀಡಿದ ವಿರಾಟ್ ಕೊಹ್ಲಿ ಅವರು ಇಂಗ್ಲೆಂಡ್ ವಿರುದ್ಧದ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಭರ್ಜರಿ ಅಜೇಯ ಅರ್ಧಶತಕ ಸಿಡಿಸಿದರು. ಎರಡನೇ ಟ್ವೆಂಟಿ ಪಂದ್ಯದಲ್ಲಿ 49 ಎಸೆತಗಳಿಗೆ ಅಜೇಯ 73 ರನ್ ಬಾರಿಸಿ ನಾನು ಮತ್ತೆ ಫಾರ್ಮ್ ಗೆ ಬಂದಿದ್ದೇನೆ ಎಂದು ಹೇಳಿದರು. ಇದೀಗ ಮೂರನೇ ಟಿ ಟ್ವೆಂಟಿ ಪಂದ್ಯ ದಲ್ಲಿಯೂ ಸಹ ಅಬ್ಬರದ ಬ್ಯಾಟಿಂಗ್ ಮಾಡಿರುವ ವಿರಾಟ್ ಕೊಹ್ಲಿ ಅವರು 46 ಎಸೆತಗಳಲ್ಲಿ ಅಜೇಯ 77 ರನ್ ಗಳಿಸಿ ಅಪಾಯದ ಸುಳಿಯಲ್ಲಿದ್ದ ಟೀಮ್ ಇಂಡಿಯಾವನ್ನು ಕಾಪಾಡಿದರು. ಈ ಮೂಲಕ ಬ್ಯಾಕ್ ಟು ಬ್ಯಾಕ್ ಅರ್ಧ ಶತಕ ಸಿಡಿಸುವುದರ ಮೂಲಕ ಕಿಂಗ್ ಈಸ್ ಬ್ಯಾಕ್ ಎಂಬುದನ್ನು ಸಾಬೀತುಪಡಿಸಿದ್ದಾರೆ..