ರಾಜ್ಯದಲ್ಲಿ ಮತ್ತೆ ಕೊರೊನಾ ಆರ್ಭಟ..!

Date:

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿದ್ದು, ಶನಿವಾರ ಒಂದೇ ದಿನ 1,798 ಹೊಸ ಕೇಸ್‌ಗಳು ದೃಢಪಟ್ಟಿವೆ. ಈ ಮೂಲಕ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ 2,000 ತಲುಪುವ ಸನ್ನಾಹದಲ್ಲಿದೆ. ಪರೀಕ್ಷೆಗಳಿಗೆ ಹೋಲಿಸಿದರೆ ಪಾಸಿಟಿವ್‌ ಕೇಸ್‌ಗಳ ಪ್ರಮಾಣ ಶೇ.1.91 ತಲುಪಿದೆ.

ಜಿಲ್ಲಾವಾರು ನೋಡುವುದಾದರೆ ಬೆಂಗಳೂರು ನಗರವೊಂದರಲ್ಲೇ 1,186 ಹೊಸ ಪ್ರಕರಣ ವರದಿಯಾಗಿವೆ. ಉಡುಪಿಯಲ್ಲಿ 66, ಕಲಬುರಗಿಯಲ್ಲಿ 61, ಮೈಸೂರಿನಲ್ಲಿ 59 ಹಾಗೂ ದಕ್ಷಿಣ ಕನ್ನಡದಲ್ಲಿ 52 ಪ್ರಕರಣಗಳು ದೃಢಪಟ್ಟಿವೆ. ಇದೇ ವೇಳೆ 11 ಜಿಲ್ಲೆಗಳಲ್ಲಿ ಒಂದಂಕಿ ಪ್ರಕರಣಗಳಷ್ಟೆ ವರದಿಯಾಗಿದ್ದರೆ, ಹಾವೇರಿ ಮತ್ತು ಉತ್ತರ ಕನ್ನಡದಲ್ಲಿ ಒಂದೇ ಒಂದು ಹೊಸ ಕೇಸ್‌ ಪತ್ತೆಯಾಗಿಲ್ಲ.

ರಾಜ್ಯದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರಿಕೆಯಾಗುತ್ತಿದ್ದರೆ, ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಇದೇ ವೇಗದಲ್ಲಿ ಏರಿಕೆಯಾಗುತ್ತಿಲ್ಲ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.

ಶನಿವಾರ ಕೋವಿಡ್‌ನಿಂದ 1,030 ಜನರು ಚೇತರಿಸಿಕೊಂಡಿದ್ದು, ಇಲ್ಲಿಯವರೆಗೆ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 9,43,208ಕ್ಕೆ ತಲುಪಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 12,828ಕ್ಕೆ ಏರಿಕೆಯಾಗಿದೆ. ಇವರಲ್ಲಿ 134 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 46 ಜನರು ಐಸಿಯುನಲ್ಲಿದ್ದರೆ, ಕಲಬುರಗಿಯಲ್ಲಿ 17 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಒಂದಂಕಿ ರೋಗಿಗಳಷ್ಟೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...