ಕಳೆದ 2ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಯುವರತ್ನ ಚಿತ್ರದ ತಂಡ ಭೇಟಿ ನೀಡಿ ಯುವ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯುವ ಸಂಭ್ರಮ ಕಾರ್ಯಕ್ರಮವನ್ನು ನಡೆಸಿದ ಯುವರತ್ನ ತಂಡ ಇಂದು ಮೈಸೂರು ಭಾಗಕ್ಕೆ ಬಂದಿದೆ.
ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿದ ಪುನೀತ್ ರಾಜ್ ಕುಮಾರ್ ಅವರ ಕಾರನ್ನು ತಡರಾತ್ರಿ ಅಡ್ಡಹಾಕಿದ ಅಪ್ಪು ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರಿಗೆ ಮಾಲಾರ್ಪಣೆ ಮಾಡಿ ಘೋಷಣೆ ಕೂಗಿ ಸ್ವಾಗತಿಸಿದರು. ಇದು ಪುನೀತ್ ರಾಜ್ ಕುಮಾರ್ ಅವರಿಗೆ ಬೃಹತ್ ಸೇಬಿನ ಹಾರವನ್ನು ಹಾಕಿ ರಸ್ತೆ ಜಾಮ್ ಆಗುವ ಮಟ್ಟಿಗೆ ಅಭಿಮಾನಿಗಳು ಕಿಕ್ಕಿರಿದು ಸೇರಿ ಸಂಭ್ರಮಿಸಿದರು.
ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪುನೀತ್ ರಾಜ್ ಕುಮಾರ್ ಅವರು ಮೈಸೂರಿನಲ್ಲಿ ಎಷ್ಟು ಕ್ರೇಜ್ ಹುಟ್ಟು ಹಾಕಿದ್ದಾರೆ ಎಂಬುದಕ್ಕೆ ಹಿಡಿದ ಕನ್ನಡಿಯಾಗಿದೆ.