ಕಳೆದ ಬಾರಿಯ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಲೀಗ್ ಹಂತದಲ್ಲಿಯೇ ಹೊರಬಿದ್ದಿತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಕಮ್ ಬ್ಯಾಕ್ ಮಾಡುವ ತವಕದಲ್ಲಿದೆ. ಹೊಸ ಹುರುಪಿನೊಂದಿಗೆ ಈ ಬಾರಿಯ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ತೋರಲು ತಯಾರಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಹೊಸ ಜೆರ್ಸಿಯನ್ನು ಅನಾವರಣ ಮಾಡಿದೆ.
ನಾಯಕ ಎಂಎಸ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೊಸ ಜೆರ್ಸಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಪ್ರತಿ ಆವೃತ್ತಿಯಂತೆ ಈ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಲ್ಲೋ ಜೆರ್ಸಿ ತೊಟ್ಟು ಆಡಲಿದ್ದು ಈ ಬಾರಿ ಹೆಗಲ ಮೇಲೆ ಸೈನ್ಯದ ಸಮವಸ್ತ್ರದ ಬಣ್ಣವನ್ನು ಬಳಸಲಾಗಿರುವುದು ವಿಶೇಷ.
ಹೀಗೆ ವಿಭಿನ್ನವಾದ ಜೆರ್ಸಿಯನ್ನು ಎಂಎಸ್ ಧೋನಿ ಅವರು ಬಿಡುಗಡೆಗೊಳಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಸೀಟಿ ಹೊಡೆಯಲು ಶುರು ಮಾಡಿಕೊಳ್ಳಿ ಎಂಬ ಸಂದೇಶವನ್ನು ನೀಡಿದ್ದಾರೆ.