ವಿಶೇಷ ಮೈಲುಗಲ್ಲುಸ್ಥಾಪಿಸಿದ ಕಿಂಗ್ ಕೊಹ್ಲಿ

Date:

ಭಾರತ ಹಾಗೂ ಇಂಗ್ಲೆಂಡ್ ಏಕದಿನ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕಾದಾಟಕ್ಕೆ ಇಳಿದಿದೆ. ಏಕದಿನ ಸರಣಿಯಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಪಂದ್ಯ ಗೆದ್ದಿರುವ ಹಿನ್ನೆಲೆಯಲ್ಲಿ ಇಂದಿನ ಪಂದ್ಯ ಬಹಳ ಮುಖ್ಯವಾಗಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲಿ ಸ್ಥಾಪಿಸಿದ್ದಾರೆ.

ಭಾರತ ತಂಡವನ್ನು ವಿರಾಟ್ ಕೊಹ್ಲಿ ಇಂದು 200ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಕೇವಲ ಮೂರನೇ ಭಾರತೀಯ ನಾಯಕ ಎನಿಸಿದ್ದಾರೆ. ಎಂಎಸ್ ಧೋನಿ ಹಾಗೂ ಮೊಹಮ್ಮದ್ ಅಜರುದ್ದೀನ್ ಈ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಇದ್ದಾರೆ.

ಎಂಎಸ್ ಧೋನಿ ನಾಯಕನಾಗಿ ಟೀಮ್ ಇಂಡಿಯಾವನ್ನು 332 ಪಂದ್ಯಗಳನ್ನು ಮುನ್ನಡೆಸಿದ್ದು ಮೊಹಮ್ಮದ್ ಅಜರುದ್ದೀನ್ 221 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದಾರೆ. ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ನಾಲ್ಕನೇ ಸ್ಥಾನದಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇದ್ದಾರೆ. ಗಂಗೂಲಿ ಭಾರತ ತಂಡವನ್ನು 195 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ.

ಇನ್ನು ಗೆಲುವಿನ ಲೆಕ್ಕಾಚಾರಗಳನ್ನು ನೋಡುವುದಾದರೆ ಭಾರತ ನಾಯಕ ಕೊಹ್ಲಿಯ ನಾಯಕತ್ವದಲ್ಲಿ 127 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎಂಎಸ್ ಧೋನಿ ನಾಯಕತ್ವದಲ್ಲಿ 178 ಗೆಲುವುಗಳನ್ನು ಕಂಡಿದೆ. ಅಜರುದ್ದೀನ್ ಮುನ್ನಡೆಸಿದ 221 ಪಂದ್ಯಗಳಲ್ಲಿ ಭಾರತ 104 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿಯೂ ಭಾರತದ ನಾಯಕ ವಿರಾಟ್ ಕೊಹ್ಲಿ ಟಾಸ್ ಸೋತಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಸತತ 6ನೇ ಬಾರಿಗೆ ಭಾರತ ಟಾಸ್ ಸೋತಂತಾಗಿದೆ. ಮೊದಲಿಗೆ ಭಾರತ ಬ್ಯಾಟಿಂಗ್ ನಡೆಸಲು ಕಣಕ್ಕಿಳಿದಿದೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...