No menu items!
11.1 C
Munich
Wednesday, April 29, 2026

ಆರ್ ಸಿಬಿಗೆ ಕಹಿ – ಕನ್ನಡಿಗ ಪಡಿಕ್ಕಲ್ ಗೆ ಕೊರೊನಾ!

Must read

ಆರ್‌ಸಿಬಿ ಆಟಗಾರ ದೇವದತ್ ಪಡಿಕ್ಕಲ್‌ಗೆ ಕೊರೊನಾ ವೈರಸ್ ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಐಪಿಎಲ್‌ಗೆ ಕೆಲವೇ ದಿನಗಳು ಬಾಕಿಯಿರುವಾಗ ಈ ಬೆಳವಣಿಗೆ ಐಪಿಎಲ್‌ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಭಾನುವಾರ ನಡೆಸಿದ ಪರೀಕ್ಷೆಯಲ್ಲಿ ದೇವದತ್ ಪಡಿಕ್ಕಲ್‌ಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಹೀಗಾಗಿ ಆರ್‌ಸಿಬಿ ತಂಡದ ಈ ಆಟಗಾರನನ್ನು ಈಗ ಉಳಿದ ತಂಡದ ಸದಸ್ಯರಿಂದ ಪ್ರತ್ಯೇಕವಾಗಿರಿಸಲಾಗಿದ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ದೇವದತ್ ಪಡಿಕ್ಕಲ್‌ಗೆ ಕೊರೊನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಅವರು ಆಡುವುದು ಅನುಮಾನವಾಗಿದೆ. ಚೆನ್ನೈನಲ್ಲಿ ಆರ್‌ಸಿಬಿ ಹಾಗೂ ಮುಂಬೈ ತಂಡಗಳು ಏಪ್ರಿಲ್ 9ರಂದು ಉದ್ಘಾಟನಾ ಪಂದ್ಯದಲ್ಲಿ ಆಡಲು ಇಳಿಯಲಿದೆ.

ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ತಂಡದ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಪಡಿಕ್ಕಲ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ದೊಡ್ಡ ಸ್ಟಾರ್ ಆಗಿ ಮಿಂಚಿದ್ದರು. ಕಳೆದ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಪ್ಲೇಆಫ್ ಹಂತಕ್ಕೇರಲು ದೇವದತ್ ಪಡಿಕ್ಕಲ್ ಕೂಡ ಕಾರಣರಾಗಿದ್ದರು. ಸ್ಥಿರ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದ ಪಡಿಕ್ಕಲ್ ದಿಗ್ಗಜರಿಂದ ಮೆಚ್ಚುಗೆಗೆ ಒಳಗಾಗಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲಿ ಕೊರೊನಾ ವೈರಸ್‌ಗೆ ತುತ್ತಾಗಿರುವ ಮೂರನೇ ಆಟಗಾರನಾಗಿದ್ದಾರೆ ದೇವದತ್ ಪಡಿಕ್ಕಲ್. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಿತೀಶ್ ರಾಣಾ ಮೊದಲಿಗೆ ಕೊರೊನಾ ವೈರಸ್‌ಗೆ ತುತ್ತಾಗಿರುವುದು ಪತ್ತೆಯಾಗಿತ್ತು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಕ್ಷರ್ ಪಟೇಲ್‌ ಕೂಡ ಕೊರೊನಾ ವೈರಸ್‌ಗೆ ತುತ್ತಾಗಿರುವುದು ದೃಢಪಟ್ಟಿತ್ತು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article