ಬೆಂಗಳೂರು: ಕೋವಿಡ್ ಸಂಕಷ್ಟದ ನಡುವೆಯೂ ಭಾರತವು ವಿಶ್ವದ ಪ್ರಮುಖ ರಾಷ್ಟ್ರವಾಗಿ ಹೊರಹೊಮ್ಮಿದೆ. ಕೇಂದ್ರ ಸರಕಾರದ ವಿಶ್ವವಂದ್ಯ ನಾಯಕರು ಮತ್ತು ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯೇ ಇದಕ್ಕೆ ಕಾರಣ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರು ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಬೆಳಗಾವಿಯಲ್ಲಿ ಗೆಲುವು ಸಾಧಿಸಲಿದ್ದಾರೆ. ದಿವಂಗತ ಸುರೇಶ್ ಅಂಗಡಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಮತ್ತು ರಾಜ್ಯದಲ್ಲಿನ ಜನಪರ ಕಾರ್ಯಕ್ರಮಗಳನ್ನು ಬೆಂಬಲಿಸಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ನುಡಿದರು.
ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಷಿ, ರಾಜ್ಯಸಭಾ ಸದಸ್ಯರು ಮತ್ತು ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ, ರಾಜ್ಯದ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್, ಶ್ರೀ ಉಮೇಶ್ ಕತ್ತಿ, ಶಾಸಕರಾದ ಶ್ರೀ ಅಭಯ್ ಪಾಟೀಲ್, ಶ್ರೀ ಅನಿಲ್ ಬೆನಕೆ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಸಂಜಯ್ ಪಾಟೀಲ್, ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ, ಮುಖಂಡರು ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು.
ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ