ನಟ ದ್ವಾರಕೀಶ್ ಪತ್ನಿ ವಿಧಿವಶ

Must read

ಬೆಂಗಳೂರು: ನಟ, ನಿರ್ಮಾಪಕ ಹಾಗೂ ನಿರ್ದೇಶಕ ದ್ವಾರಕೀಶ್ ಅವರ ಪತ್ನಿ ಅಂಬುಜಾ ದ್ವಾರಕೀಶ್(80) ಅವರು ವಿಧಿವಶರಾಗಿದ್ದಾರೆ.

ಅಂಬುಜಾ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತಿದ್ದರು. ಇಂದು ಮಧ್ಯಾಹ್ನ ಹೆಚ್‍ಎಸ್‍ಆರ್ ಲೇಔಟ್‍ನ ಮನೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ದ್ವಾರಕೀಶ್ ಅವರ ಕುಟುಂಬ ದುಃಖದ ಮಡುವಿನಲ್ಲಿದೆ.

ದ್ವಾರಕೀಶ್ ಹಾಗೂ ಅಂಬುಜಾ ಅವರು ಪ್ರೀತಿಸಿ ವಿವಾಹವಾಗಿದ್ದರು. ಇತ್ತೀಚೆಗಷ್ಟೇ ಅಂಬುಜಾ ಅವರು ತಮ್ಮ 80ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬಸ್ಥರು ಹಾಗೂ ಹಿತೈಶಿಗಳೊಂದಿಗೆ ಆಚರಿಸಿಕೊಂಡಿದ್ದರು.

 

- Advertisement -spot_img

More articles

- Advertisement -spot_img

Latest article