ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಬಲಿಷ್ಠ ತಂಡಗಳೆಂದರೆ ಒಂದು ಮುಂಬೈ ಇಂಡಿಯನ್ಸ್, ಮತ್ತೊಂದು ಚೆನ್ನೈ ಸೂಪರ್ ಕಿಂಗ್ಸ್. ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ಬಾರಿ ಐಪಿಎಲ್ ಟ್ರೋಫಿಯನ್ನು ಗೆದ್ದಿದ್ದರೆ, ಮುಂಬೈ ಇಂಡಿಯನ್ಸ್ ತಂಡ 5 ಬಾರಿ ಚಾಂಪಿಯನ್ಸ್ ಆಗಿದೆ. ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 107 ಪಂದ್ಯಗಳಲ್ಲಿ ಸಾಧಿಸಿದರೆ, ಮುಂಬೈ ಇಂಡಿಯನ್ಸ್ ತಂಡ ಇದುವರೆಗೂ ಒಟ್ಟು 119 ಪಂದ್ಯಗಳಲ್ಲಿ ಗೆದ್ದು ಬೀಗಿದೆ.
ಮೇಲಿನ ಅಂಕಿ ಅಂಶಗಳನ್ನು ಗಮನಿಸಿದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕಿಂತ ಮುಂಬೈ ಇಂಡಿಯನ್ಸ್ ತಂಡ ತುಂಬಾ ಬಲಿಷ್ಠವಾಗಿದೆ ಎಂದು ತೋರುತ್ತದೆ. ಹಾಗಂತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಕಡಿಮೆ ಏನಿಲ್ಲ. ರನ್ ಚೇಸಿಂಗ್ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಖತ್ ಡೇಂಜರಸ್ ಎಂದು ಈ ಕೆಳಕಂಡ ಅಂಕಿ ಅಂಶಗಳೇ ಹೇಳುತ್ತವೆ.
ಐಪಿಎಲ್ ಪಂದ್ಯಗಳಲ್ಲಿ ರನ್ ಚೇಸ್ ಮಾಡುವ ವೇಳೆ ಅತಿಹೆಚ್ಚು ಗೆಲುವಿನ ಶೇಕಡಾಂಶವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊಂದಿದೆ. ರನ್ ಚೇಸ್ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 63.9ರಷ್ಟು ಗೆಲುವಿನ ಶೇಕಡಾಂಶವನ್ನು ಹೊಂದಿದ್ದು ಅಗ್ರಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡ ರನ್ ಚೇಸ್ ಪಂದ್ಯಗಳಲ್ಲಿ 61.3ರಷ್ಟು ಗೆಲುವಿನ ಶೇಕಡಾಂಶವನ್ನು ಹೊಂದಿದೆ. ಈ ಅಂಶಗಳನ್ನು ಗಮನಿಸಿದರೆ ಚೇಸಿಂಗ್ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೇಂಜರಸ್ ಎಂಬ ಅಂಶ ಸ್ಪಷ್ಟವಾಗಿದೆ. ಚೇಸಿಂಗ್ ಪಂದ್ಯಗಳಲ್ಲಿ ಅತಿಹೆಚ್ಚು ಗೆಲುವಿನ ಶೇಕಡಾಂಶ ಹೊಂದಿರುವ ತಂಡಗಳ ಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗ್ರಸ್ಥಾನದಲ್ಲಿದ್ದು ಮುಂಬೈ ಇಂಡಿಯನ್ಸ್ ತಂಡ ಎರಡನೇ ಸ್ಥಾನದಲ್ಲಿದೆ.