18 ವರ್ಷ ಮೇಲ್ಪಟ್ಟವರಿಗೆಲ್ಲಾ ಕೊರೊನಾ ಲಸಿಕೆ!

Date:

ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 1 ರಿಂದ18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕರೊನಾ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

 

ಅತಿ ಕಡಿಮೆ ಅವಧಿಯಲ್ಲಿ ದೇಶದ ಗರಿಷ್ಠ ಜನತೆಗೆ ವ್ಯಾಕ್ಸಿನ್ ನೀಡುವ ನಿಟ್ಟಿನಲ್ಲಿ ಕೇಂದ್ರ ಕ್ರಮ ಕೈಗೊಳ್ಳುತ್ತಿದೆ. 3ನೇ ಹಂತದ ಲಸಿಕಾ ಕಾರ್ಯಕ್ರಮದಡಿ ಲಸಿಕೆ ನೀಡುವಿಕೆ ಕಾರ್ಯಕ್ಕೆ ವೇಗ ನೀಡಲಾಗಿದೆ. ಲಸಿಕೆ ತಯಾರಕರು ಪ್ರತಿ ತಿಂಗಳು ತಮ್ಮ ಉತ್ಪಾದನೆಯ ಶೇ.50ರಷ್ಟು ಲಸಿಕೆಗಳನ್ನು ಕೇದ್ರ ಸರಕಾರಕ್ಕೆ ಉಚಿತವಾಗಿ ಪೂರೈಸಲಿವೆ. ಉಳಿದ ಶೇ.50ರಷ್ಟು ಲಸಿಕೆಗಳನ್ನು ರಾಜ್ಯ ಸರಕಾರಗಳಿಗೆ ಮುಕ್ತ ಮಾರುಕಟ್ಟೆಯಲ್ಲಿ ನೀಡಲಿವೆ ಎಂದು ಕೇಂದ್ರ ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಸರಕಾರವು ತನ್ನ ಪಾಲಿಗೆ ಬಂದ ಲಸಿಕೆಗಳನ್ನು ಸೋಂಕಿನ ವ್ಯಾಪ್ತಿ (ಸಕ್ರಿಯ ಪ್ರಕರಣಗಳ ಸಂಖ್ಯೆ) ಮತ್ತು ಕಾರ್ಯಕ್ಷಮತೆ ಆಧಾರದ ಮೇಲೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಲಿದೆ. ಇಲ್ಲಿ ಲಸಿಕೆಗಳು ವ್ಯರ್ಥವಾಗುವ ಪ್ರಮಾಣವನ್ನೂ ಪರಿಗಣಿಸಲಾಗುತ್ತದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಈ ಮೊದಲು ತಿಳಿಸಿದಂತೆ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನರಿಗೆ ಹಾಗೂ ಕೊರೊನಾ ವಾರಿಯರ್ಸ್‌ಗೆ ಉಚಿತವಾಗಿ ಲಸಿಕೆ ನೀಡಿಕೆ ಮುಂದುವರಿಯಲಿದೆ. ಆರೋಗ್ಯ ಕಾರ್ಯಕರ್ತರು, ಕೋವಿಡ್‌ ವಾರಿಯರ್ಸ್‌ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸರಕಾರದ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ನೀಡುವುದು ಮುಂದುವರಿಯಲಿದೆ.

 

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...