ನವದೆಹಲಿ: ಕೊರೊನಾ ವೈರಸ್ ಸೋಂಕಿನಿಂದಾಗಿ ಮನುಷ್ಯನ ದೇಹದಲ್ಲಿ ಆಮ್ಲಜನಕದ ಕೊರತೆ ಮಾತ್ರ ಉಂಟಾಗುತ್ತದೆ. ಆದರೆ ಮೋದಿ ಸರ್ಕಾರದ ನಿರ್ಲಕ್ಷ್ಯ ತೊರುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಕೊರೋನಾ ವೈರಸ್ ಸೋಂಕಿನಿಂದಾಗಿ ಮನುಷ್ಯನ ದೇಹದಲ್ಲಿ ಆಮ್ಲಜನಕದ ಕೊರತೆ ಮಾತ್ರ ಉಂಟಾಗುತ್ತದೆ. ಆದರೆ ಮೋದಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗೆ ಅನಿವಾರ್ಯವಾಗಿ ಬೇಕಾದ ಆಮ್ಲಜನಕ ಜನಕದ ಸಿಲಿಂಡರ್‌ಗಳು ಮತ್ತು ಐಸಿಯು ಬೆಡ್ ಕೊರತೆಯುಂಟಾಗಿದೆ. ಇದರಿಂದಲೇ ಸಾವಿರಾರು ಮಂದಿ ನಿತ್ಯ ಸಾವಿಗೀಡಾಗುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಇಂದು 3.32 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದು ಈ ವರೆಗಿನ ದಾಖಲೆಯಾಗಿ ಉಳಿದಿದೆ. ಅಂತೆಯೇ 2,263 ಸೋಂಕಿತರು ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಹಲವು ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ ಕೊರೊನಾ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.