ಈ ರೀತಿಯ ಶತಕವನ್ನು ನೋಡಿರಲಿಲ್ಲ ; ಪಡಿಕ್ಕಲ್ ಶತಕವನ್ನು ಹೊಗಳಿದ ಹಿರಿಯ ಆಟಗಾರ

Date:

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಪಂದ್ಯ ಗುರುವಾರ ( ಏಪ್ರಿಲ್ 22 ) ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್‍ಗಳ ನಷ್ಟಕ್ಕೆ 177 ರನ್ ಗಳಿಸಿತು. 178 ರನ್‌ಗಳ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಕೇವಲ 16.3 ಓವರ್‌ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ 181 ರನ್ ಗಳಿಸಿ 10 ವಿಕೆಟ್‍ಗಳ ಅಮೋಘ ಜಯವನ್ನು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಈ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ 52 ಎಸೆತಗಳಿಗೆ 101 ರನ್ ಬಾರಿಸಿ ಅಜೇಯರಾಗಿ ಉಳಿದರು. ಪಡಿಕ್ಕಲ್ ಈ ಶತಕ ಬಾರಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿಯೇ ಅತಿ ವೇಗವಾಗಿ ಶತಕ ಬಾರಿಸಿದ ಅನ್ ಕ್ಯಾಪ್ಡ್ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಹೌದು ಕೇವಲ 51 ಎಸೆತಗಳಲ್ಲಿ ಶತಕ ಬಾರಿಸಿದ ದೇವದತ್ ಪಡಿಕ್ಕಲ್ ದಾಖಲೆ ನಿರ್ಮಿಸಿದರು. ಪಡಿಕ್ಕಲ್ ಬಾರಿಸಿದ ಈ ದಾಖಲೆಯ ಶತಕದ ಕುರಿತು ಭಾರತದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

 

 

’14 ಐಪಿಎಲ್ ಆವೃತ್ತಿಗಳಲ್ಲಿ ಅನ್ ಕ್ಯಾಪ್ಡ್ ಆಟಗಾರರು ಬಾರಿಸಿದ ಶತಕಗಳ ಪೈಕಿ ನಾನು ನೋಡಿದ ಅತ್ಯುತ್ತಮ ಶತಕವೆಂದರೆ ಅದು ಪಡಿಕ್ಕಲ್ ಬಾರಿಸಿದ ಶತಕ’ ಎಂದು ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಪಡಿಕ್ಕಲ್ ಶತಕವನ್ನು ಹಾಡಿ ಹೊಗಳಿದ್ದಾರೆ. ಕಳೆದೆರಡು ಐಪಿಎಲ್ ಪಂದ್ಯಗಳಲ್ಲಿ ಮಂಕಾಗಿದ್ದ ಪಡಿಕ್ಕಲ್ ಈ ದಾಖಲೆಯ ಶತಕ ಸಿಡಿಸುವುದರ ಮೂಲಕ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ ಹಾದಿಗೆ ಮರಳಿದ್ದಾರೆ. ಭಾನುವಾರ ( ಏಪ್ರಿಲ್ 25 ) ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು, ಆ ಪಂದ್ಯ ಕೂಡ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವುದರಿಂದ ಪಡಿಕ್ಕಲ್ ಮತ್ತೊಮ್ಮೆ ಅಬ್ಬರಿಸುವ ಸಾಧ್ಯತೆಗಳಿವೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...