ಆ್ಯಂಡ್ರೆ ರಸೆಲ್ ಇರುವುದೇ ವೇಸ್ಟ್ ಎಂದ ಮಾಜಿ ಕ್ರಿಕೆಟಿಗ

Date:

ಕೊಲ್ಕತ್ತಾ ನೈಟ್ ರೈಡರ್ಸ್ ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಟೂರ್ನಿಯಲ್ಲಿ ಇದುವರೆಗೂ ಒಟ್ಟು 5 ಪಂದ್ಯಗಳನ್ನಾಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಗೆದ್ದಿರುವುದು ಕೇವಲ ಒಂದು ಪಂದ್ಯದಲ್ಲಿ. ಶನಿವಾರ ( ಏಪ್ರಿಲ್ 24 ) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮೊದಲು ಬ್ಯಾಟಿಂಗ್ ಮಾಡಿತು. ಹಿಂದಿನ ಪಂದ್ಯಗಳಲ್ಲಿ ಆ್ಯಂಡ್ರೆ ರಸೆಲ್ ಹಾಗೂ ಪ್ಯಾಟ್ ಕಮಿನ್ಸ್ ಅಬ್ಬರದ ಬ್ಯಾಟಿಂಗ್ ನಡೆಸಿದ್ದ ಕಾರಣ ಈ ಪಂದ್ಯದಲ್ಲಿಯೂ ಸಹ ಕೊಲ್ಕತ್ತಾ ನೈಟ್ ರೈಡರ್ಸ್ ಬೃಹತ್ ಮೊತ್ತ ಕಲೆ ಹಾಕಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಹುಸಿಯಾಯಿತು, ಕೆಕೆಆರ್ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 133 ರನ್ ಗಳಿಸಿತು. 134 ರನ್‌ಗಳ ಸುಲಭದ ಮೊತ್ತವನ್ನು ರಾಜಸ್ಥಾನ್ ರಾಯಲ್ಸ್ ತಂಡ ಬೆನ್ನತ್ತಿ ಗೆಲುವು ಸಾಧಿಸಿತು.

ಈ ಪಂದ್ಯದ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟೂರ್ನಿಯಲ್ಲಿ ನಾಲ್ಕನೇ ಸೋಲನ್ನನುಭವಿಸಿತು. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸಾಲುಸಾಲು ಕಳಪೆ ಪ್ರದರ್ಶನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿದ್ದು ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸೋಲಿನ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸ್ಫೋಟಕ ಆಟಗಾರ ಆ್ಯಂಡ್ರೆ ರಸೆಲ್ ಇದ್ದಾರೆ, ಆದರೆ ಅವರನ್ನು ತೀರಾ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಕಳುಹಿಸುತ್ತಿರುವುದರಿಂದ ಕೊಲ್ಕತ್ತಾ ದೊಡ್ಡ ಮೊತ್ತವನ್ನು ಪೇರಿಸುವಲ್ಲಿ ವಿಫಲವಾಗುತ್ತಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟರು.

 

 

ಶನಿವಾರ ನಡೆದ ರಾಜಸ್ತಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿಯೂ ಕೂಡ ಆ್ಯಂಡ್ರೆ ರಸೆಲ್ 16ನೇ ಓವರ್‌ನಲ್ಲಿ ಬ್ಯಾಟಿಂಗ್ ಮಾಡಲು ಬಂದರು ಆ ಸಮಯದಲ್ಲಿ ಕೊಲ್ಕತ್ತಾ ತಂಡದ ಮೊತ್ತ 94/5 ಇತ್ತು. ಕೊನೆಯ ಕೆಲ ಓವರ್‌ಗಳು ಬಾಕಿ ಉಳಿದಿರುವಾಗ ರಸೆಲ್ ಅವರನ್ನು ಬ್ಯಾಟ್ ಮಾಡಲು ಕಳುಹಿಸಿ ದೊಡ್ಡ ಮೊತ್ತವನ್ನು ಅವರಿಂದ ನಿರೀಕ್ಷಿಸುವುದು ಎಷ್ಟು ಸರಿ ಎಂದು ಆಕಾಶ್ ಚೋಪ್ರಾ ಪ್ರಶ್ನಿಸಿದರು. ಆ್ಯಂಡ್ರೆ ರಸೆಲ್ ಬ್ಯಾಟ್ ಹಿಡಿದು ಬಂದರೆ ಎದುರಾಳಿ ತಂಡದ ಆಟಗಾರರಲ್ಲಿ ಭಯದ ವಾತಾವರಣವಿರುವುದು ಎಲ್ಲರಿಗೂ ತಿಳಿದದ್ದೇ, ಹೀಗಾಗಿ ರಸೆಲ್ ಅವರನ್ನು ಬೇಗ ಕಣಕ್ಕಿಳಿಸುವುದು ಉತ್ತಮ, ಅವರು ಎದುರಾಳಿ ಆಟಗಾರರ ಮೇಲೆ ಒತ್ತಡ ಹೇರುವುದಷ್ಟೇ ಅಲ್ಲದೆ ಹೆಚ್ಚಿನ ರನ್ ಕೂಡ ಬಾರಿಸುತ್ತಾರೆ ಎಂದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಕಾಶ್ ಚೋಪ್ರಾ ಪ್ರಮುಖವಾದ ಸಲಹೆಯೊಂದನ್ನು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...