ಸಿದ್ದರಾಮಯ್ಯ ಯಾವತ್ತು ನನ್ನ ರಾಜೀನಾಮೆ ಕೇಳಿಲ್ಲ?

Date:

ಬೆಂಗಳೂರು: ಸಿದ್ದರಾಮಯ್ಯ ಅವರು ಯಾವತ್ತು ನನ್ನ ರಾಜೀನಾಮೆ ಕೇಳಿಲ್ಲ ಹೇಳಿ. ಸಿದ್ದರಾಮಯ್ಯ ಅವರು ನನ್ನ ಎಲ್ಲದಕ್ಕೂ ರಾಜೀನಾಮೆ ಕೇಳಿದ್ದಾರೆ. ಆದರೆ ನಾನು ಮಾತ್ರ ನನ್ನ ಕರ್ತವ್ಯವನ್ನು ಮುಂದುವರೆಸಿಕೊಂಡು ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಇಂದು(ಮೇ.4-ಮಂಗಳವಾರ)ತುರ್ತು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಬಿಎಸ್‌ವೈ, ಪ್ರತಿಪಕ್ಷದವರು ಯಾವಾಗಲೂ ಆಡಳಿತ ಪಕ್ಷದವರ ರಾಜೀನಾಮೆ ಕೇಳುವುದು ಸಹಜ ಎಂದು ಹೇಳಿದರು.

 

ಸಿದ್ದರಾಮಯ್ಯ ಪದೇ ಪದೇ ನನ್ನ ರಾಜೀನಾಮೆಗೆ ಆಗ್ರಹಿಸುವ ಬದಲು, ಕೋವಿಡ್ ಅಲೆ ನಿಯಂತ್ರಿಸಲು ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ಕೊಡಲಿ ಎಂದು ಇದೇ ವೇಳೆ ಸಿಎಂ ಬಿಎಸ್‌ವೈ ತಿರುಗೇಟು ನೀಡಿದರು.

ಇನ್ನು ತುರ್ತು ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯಗಳ ಕುರಿತು ಮಾಹಿತಿ ನೀಡಿದ ಸಿಎಂ ಬಿಎಸ್‌ವೈ, ಕೋವಿಡ್ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.

ನಾಳೆಯಿಂದಲೇ ಎಲ್ಲಾ ಜಿಲ್ಲಾ ಉಸ್ತುವಾರಿಗಳು ಸ್ಥಳದಲ್ಲಿ ಇದ್ದು ಸಮಸ್ಯೆ ಬಗೆಹರಿಸಬೇಕು. ಆಕ್ಸಿಜನ್, ರೆಮ್‌ಡಿಸಿವಿರ್, ವಾರ್ ರೂಂ ಹೀಗೆ ಉಸ್ತುವಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ರೆಮ್‌ಡಿಸಿವಿರ್, ಔಷಧ ಕೊರತೆ ನಿವಾರಣೆ ಅಗತ್ಯ ಮಾನವ ಸಂಪನ್ಮೂಲ ಕ್ರೋಡೀಕರಿಸುವ ಜವಾಬ್ದಾರಿ ಡಿಸಿಎಂ ಅಶ್ವತ್ಥ ನಾರಾಯಣ ಅವರಿಗೆ ಕೊಡಲಾಗಿದೆ. ಅದರಂತೆ ಆರ್. ಅಶೋಕ್ ಹಾಗೂ ‌ಬಸವರಾಜ ಬೊಮ್ಮಾಯಿಗೆ ಆಕ್ಸಿಜನ್ ಬೆಡ್ ಹಾಗೂ ಖಾಸಗಿ ಆಸ್ಪತ್ರೆ ಬೆಡ್ ಕೊರತೆ ನಿವಾರಣೆಗೆ ಕ್ರಮ ಜವಾಬ್ದಾರಿ ನೀಡಲಾಗಿದೆ.

ಅರವಿಂದ ಲಿಂಬಾವಳಿ ಅವರಿಗೆ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ, ವೈದ್ಯಕೀಯ ಸಲಹೆ ವ್ಯವಸ್ಥೆ ನಿರ್ವಹಣೆಯ ಜವಾಬ್ದಾರಿ ನೀಡಲಾಗಿದೆ

ರಾಜ್ಯಕ್ಕೆ ಇದೀಗ ಆಕ್ಸಿಜನ್ 800 ಮೆಟ್ರಿಕ್ ಟನ್ ಆಕ್ಸಿಜನ್ ಬೇಕಿದ್ದು, ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಿ ಶೀಘ್ರವಾಗಿ ಆಕ್ಸಿಜನ್ ಸರಬರಾಜು ವ್ಯವಸ್ಥೆ ಮಾಡಲಾಗುವುದು ಎಂದು ಇದೇ ವೇಳೆ ಸಿಎಂ ಭರವಸೆ ನೀಡಿದರು.

ಈಗಾಗಲೇ ಆಕ್ಸಿಜನ್ ಉತ್ಪಾದಕರಿಗೆ ಹೆಚ್ವುವರಿ ಆಕ್ಸಿಜನ್ ಉತ್ಪಾದನೆಗೆ ಮನವಿ ಮಾಡಲಾಗಿದೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದರು. ಅದರಂತೆ ರೆಮ್‌ಡಿಸಿವಿರ್ ಔಷಧಿ ಕಾಳಸಂತೆಯಲ್ಲಿ ಮಾರಾಟ ಮಾಡುವ ದಂದೆಕೋರರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದೂ ಸಿಎಂ ಎಚ್ಚರಿಸಿದರು.

ಚಾಮರಾಜನಗರ ಘಟನೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಇಂತಹ ಘಟನೆಗಳು ಮರುಕಳಿಸದಂತೆ ಸಚಿವರಿಗೆ, ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿಯೂ ಸಿಎಂ ಹೇಳಿದರು.

ಜನರಲ್ಲಿರುವ ಭಯದ ವಾತಾವರಣ ಹೋಗಲಾಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಈ ನಿಟ್ಟಿನಲ್ಲಿ ಮಾಧ್ಯಮಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಮಾಧ್ಯಮದಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಿ ವ್ಯಾಕ್ಸಿನ್ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಭರವಸೆ ನೀಡಿದರು.

ಕೋವಿಡ್ ಚಿಕಿತ್ಸೆಗಾಗಿ ಅಗತ್ಯವಿರುವ ನರ್ಸ್, ಡಾಕ್ಟರ್ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಡ್ ಬ್ಲಾಕ್ ದಂಧೆ ಕುರಿತಾಗಿಯೂ ಬಗ್ಗೆ ಚರ್ಚೆ ಆಗಿದೆ. ಸಂಸದ ತೇಜಸ್ವಿ ಸೂರ್ಯ ಅವರು ಅವ್ಯವಹಾರವನ್ನು ಬಯಲು ಮಾಡಿದ್ದಾರೆ. ಅವರ ಜೊತೆ ಚರ್ಚೆ ಮಾಡಿ ಯಾರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಸಿಎಂ ಬಿಎಸ್ ವೈ ನೀಡಿದ್ದಾರೆ.

ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಅಷ್ಟೂ ಆಮ್ಲಜನಕವನ್ನು ಸ್ಥಳೀಯವಾಗಿ ಬಳಸಲು ಕೇಂದ್ರ ಅವಕಾಶ ನೀಡಿದರೆ ತಕ್ಷಣ ಬಿಕ್ಕಟ್ಟಿನಿಂದ ಪಾರಾಗಬಹುದು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಿಯೂಷ್ ಗೋಯಲ್ ಜೊತೆ ಚರ್ಚೆ ಮಾಡಿದ್ದೇನೆ. ಈ ಬಗ್ಗೆ ಭಾಗಶಃ ಒಪ್ಪಿಕೊಂಡಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...