ವಿರಾಟ್ , ರೋಹಿತ್ ಗೆ ಐಪಿಎಲ್ ಬೆಸ್ಟ್ ಟೀಂನಲ್ಲಿಲ್ಲ ಸ್ಥಾನ

Date:

ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಉಳಿದ 31 ಪಂದ್ಯಗಳು ಇಂಗ್ಲೆಂಡ್ ಅಥವಾ ಯುಎಇಯಲ್ಲಿ ನಡೆಯಲಿವೆ ಎಂಬ ಸುದ್ದಿ ಹರಿದಾಡುತ್ತಿದೆ.

 

ಈ ಸಂದರ್ಭದಲ್ಲಿ ಇದುವರೆಗೂ ನಡೆದಿರುವ ಪ್ರಸ್ತುತ ಐಪಿಎಲ್ ಟೂರ್ನಿಯ 29 ಪಂದ್ಯಗಳಲ್ಲಿನ ಆಟಗಾರರ ಪ್ರದರ್ಶನದ ಆಧಾರದ ಮೇಲೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಉತ್ತಮ ಪ್ಲೇಯಿಂಗ್ ಇಲೆವೆನ್‌ವೊಂದನ್ನು ರಚಿಸಿದ್ದಾರೆ. ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದರೂ ಕೂಡ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟೂರ್ನಿಯುದ್ದಕ್ಕೂ ಉತ್ತಮ ಆಟವನ್ನೇನೂ ಆಡದ ಕಾರಣ ಅವರನ್ನು ಬೆಸ್ಟ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೇರಿಸಿಲ್ಲ ಎಂದು ಆಕಾಶ್ ಚೋಪ್ರಾ ತಿಳಿಸಿದರು.

 

 

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರನ್ನು ಕೈಬಿಟ್ಟು ಆಕಾಶ್ ಚೋಪ್ರಾ ರಚಿಸಿದ ಪ್ರಸ್ತುತ ಟೂರ್ನಿಯ ಬೆಸ್ಟ್ ಪ್ಲೇಯಿಂಗ್ ಇಲೆವೆನ್ ಹೀಗಿದೆ : ಶಿಖರ್ ಧವನ್, ಕೆಎಲ್ ರಾಹುಲ್, ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್,ಎಬಿ ಡಿವಿಲಿಯರ್ಸ್, ರಿಷಭ್ ಪಂತ್, ರವೀಂದ್ರ ಜಡೇಜಾ, ಕ್ರಿಸ್ ಮೊರಿಸ್, ರಾಹುಲ್ ಚಹರ್ ಅವೇಶ್ ಖಾನ್ ಮತ್ತು ಹರ್ಷಲ್ ಪಟೇಲ್. ಈ ಹನ್ನೊಂದು ಆಟಗಾರರನ್ನು ಪ್ರಸ್ತುತ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ “ಸಾಲು ಮರದ ತಿಮ್ಮಕ್ಕ” ಇನ್ನಿಲ್ಲ..!

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ "ಸಾಲು ಮರದ ತಿಮ್ಮಕ್ಕ" ಇನ್ನಿಲ್ಲ..! ಬೆಂಗಳೂರು: ಪದ್ಮಶ್ರೀ ಪುರಸ್ಕೃತ...

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ!

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ! ನವದೆಹಲಿ:...

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ ಕರ್ನಾಟಕ...

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...